Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಮಾನ್ಯಗಳು ಮಾನವ ಕಲ್ಯಾಣ ಕೇಂದ್ರಗಳು :ಕೇದಾರ ಶ್ರೀ
(ರಾಜ್ಯ ) ಜಿಲ್ಲೆ

ಮಠಮಾನ್ಯಗಳು ಮಾನವ ಕಲ್ಯಾಣ ಕೇಂದ್ರಗಳು :ಕೇದಾರ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಾಗ್ಯವಿದಾತ ಗ್ರಂಥ ಬಿಡುಗಡೆ | ಜಾಲಹಳ್ಳಿ ಶ್ರೀಗಳಿಗೆ ತುಲಾಭಾರ ಸೇವೆ | ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಧರ್ಮದ ತಳಹದಿಯ ಮೇಲೆ ಶಿಕ್ಷಣ ಮತ್ತು ಸಂಸ್ಕಾರಗಳನ್ನು ನೀಡುವ ಮೂಲಕ ಮಠಮಾನ್ಯಗಳು ಮಾನವ ಕಲ್ಯಾಣ ಕೇಂದ್ರಗಳಾಗಿ ಅನಾದಿ ಕಾಲದಿಂದಲೂ ಮಾನವರನ್ನು ಉದ್ಧರಿಸುವ ಕಾರ್ಯ ಮಾಡುತ್ತಾ ಬಂದಿದ್ದು, ಈ ದಿಸೆಯಲ್ಲಿ ದಾನ ಧರ್ಮದ ಗುಣಗಳನ್ನು ಪ್ರತಿಯೊಬ್ಬರೂ ಅನುಸರಿಸಿ ನಡೆದಾಗ ಮಾತ್ರ ಉದಾತ್ತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
ಗ್ರಾಮದ ಜೆ ಜೆ ಶಿಕ್ಷಣ ಸಂಸ್ಥೆಯ ಆವರಣದ ಮಹಾಮಠದಲ್ಲಿ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮಹಾ ಸಂಸ್ಥಾನಮಠ ಜಾಲಹಳ್ಳಿ-ಕಲಕೇರಿಯ ಪೀಠಾಧಿಪತಿ ಶಿವಾಚಾರ್ಯ ರತ್ನ, ಜಗದಾರಾಧ್ಯ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ೭೦ನೇ ವರ್ಷದ ಹುಟ್ಟುಹಬ್ಬದ ವರ್ಧಂತಿ ಮಹೋತ್ಸವ ಹಾಗೂ ಅಭಿನಂದನಾ ಸಮಾರಂಭ ಸೇರಿದಂತೆ ವಿವಿದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶಕ್ತಿವಂತರರು ರಕ್ಷಣೆ ಮಾಡುವುದು, ಸಿರಿವಂತರರು ದಾನ ಮಾಡುವುದು, ಅಧಿಕಾರದಲ್ಲಿದ್ದವರು ಬಡವರ ಸೇವೆ ಮಾಡುವ ಮೂಲಕ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಬೆಳೆಸಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವಾಗಬೇಕು ಅಂದಾಗ ಮನುಷ್ಯ ಜನ್ಮ ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.
ಭಗವಂತನ ಪ್ರತಿರೂಪದಂತಿರುವ ಗುರುವಿನ ಮಠಗಳು ಬೆಳೆದಾಗ ಸಮಾಜದ ಉದ್ದಾರವಾಗಲು ಸಾಧ್ಯವಾಗುತ್ತದೆ. ಯಾವತ್ತೂ ಮಠಗಳು ಶಿಕ್ಷಣ, ಅನ್ನ, ಅರಿವೆ ಜೊತೆಗೆ ಭವರೋಗದ ನಿವಾರಣಾ ಕೇಂದ್ರಗಳಾಗಿ ಕಾರ್ಯ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಜಾಲಹಳ್ಳಿ ಜಗದಾರಾಧ್ಯ ಜಯಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಈ ಭಾಗದಲ್ಲಿ ಹಲವು ಮಠಗಳನ್ನು ಸ್ಥಾಪಿಸುವ ಮೂಲಕ ಅಸಂಖ್ಯಾತ ಭಕ್ತಬಳಗವನ್ನು ಹೊಂದುವ ಮೂಲಕ ಭಕ್ತರನ್ನು ಉದ್ಧಾರ ಮಾಡುವ ಕಾರ್ಯದಲ್ಲಿ ತೊಡಗಿದ್ದು, ಅಂತಹ ಗುರುಗಳ ಮಠಗಳು ಬೆಳವಣಿಗೆಯಾಗಲು ನಾವೆಲ್ಲ ದಾನ ಧರ್ಮದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಇದೇ ವೇಳೆ ಜಾಲಹಳ್ಳಿ ಶ್ರೀಗಳ ಜೀವನ ಚರಿತ್ರೆ ಕುರಿತಾದ ಚಾಣಕ್ಯ ಪ್ರಕಾಶನದಿಂದ ಹೊರತಂದಿರುವ ಸಾಹಿತಿ ಮನು ಪತ್ತಾರ ಅವರು ಬರೆದಿರುವ ‘ಭಾಗ್ಯವಿದಾತ’ ಜೀವನ ಚರಿತ್ರೆ ಪುಸ್ತಕವನ್ನು ಕೇದಾರ ಜಗದ್ಗುರು ಮಹಾಸನ್ನಿಧಿಯವರು ಮತ್ತು ಸಣ್ಣ ಕೈಗಾರಿಕಾ ಸಚಿವರಾದ ಶರಣಬಸಪ್ಪ ದರ್ಶನಾಪುರ ಬಿಡುಗಡೆಗೊಳಿಸಿದರು.
ಇದೇ ವೇಳೆ ಜಾಲಹಳ್ಳಿ ಶ್ರೀಗಳಿಗೆ ಅನೇಕ ಭಕ್ತರು ತುಲಾಭಾರ ಸೇವೆ ಮಾಡುವ ಮೂಲಕ ಧನ್ಯತಾಭಾವ ಮೆರೆದರು.
ಮಣ್ಣೇರಿ ಗ್ರಾಮದಿಂದ ಆಗಮಿಸಿದ ನಂದಿ(ಎತ್ತು)ಯನ್ನು ಹಣ್ಣು ಹಂಪಲು ಮತ್ತು ಕಬ್ಬಿನಿಂದ ತುಲಾಭಾರ ಸೇವೆ ಮಾಡಿದರು. ಈ ವೇಳೆ ತುಲಾಭಾರ ಮಾಡಿಸಿಕೊಂಡ ನಂದಿ ವೇದಿಕೆಯನ್ನೇರಿ ಶ್ರೀಗಳ ಆಶಿರ್ವಾದ ಪಡೆದದ್ದು ಎಲ್ಲರ ಗಮನ ಸೆಳೆಯಿತು.
ಮಾಗಣಗೇರಿಯ ಡಾ.ವಿಶ್ವಾರಾಧ್ಯ ಶಿವಾಚಾರ್ಯರು, ಗುಂಡಕನಾಳ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಆಲಮೇಲದ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಹಿರೂರು ಹಿರೇಮಠದ ಜಯಸಿದ್ದೇಶ್ವರ ಶಿವಾಚಾರ್ಯರು, ಸಿಂದಗಿಯ ವಿಶ್ವಪ್ರಭು ಶಿವಾಚಾರ್ಯರು ಮಾತನಾಡಿದರು.
ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯ ಅಧ್ಯಕ್ಷರಾದ ಸಿಂದಗಿ ಸಾರಂಗಮಠದ ಪ್ರಭುಸಾರಂಗದೇವ ಶಿವಾಚಾರ್ಯರು, ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು, ಪಂಚರಂಗ ಸಂಸ್ಥಾನ ಗದ್ದುಗೇಮಠದ ಶ್ರೀಗುರುಮಡಿವಾಳೇಶ್ವರ ಶಿವಾಚಾರ್ಯರು. ದೇವರಭೂರದ ಅಭಿನವ ಗಜದಂಡ ಶಿವಾಚಾರ್ಯರು, ಹೆಡಗಾಪೂರದ ದಾರುಕಾಲಿಂಗ ಶಿವಾಚಾರ್ಯರು, ಮುತ್ತಗಿಯ ವೀರರುದ್ರಮುನಿ ಶಿವಾಚಾರ್ಯರು ಸೇರಿದಂತೆ ವಿವಿಧ ರಾಜಕೀಯ ಮುಖಂಡರು, ಗಣ್ಯಮಾನ್ಯರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.