ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕೂಡಲಸಂಗಮ, ತಾಲ್ಲೂಕು ಘಟಕ ದೇವರಹಿಪ್ಪರಗಿ ಅಡಿಯಲ್ಲಿ ಹಿಂದೂಗಳ ಸಂಸ್ಕೃತಿ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಪಂಚಮಸಾಲಿ ಮೀಸಲಾತಿ ಪ್ರತಿಜ್ಞಾವಿಧಿ ಕಾರ್ಯಕ್ರಮ ದಿ:೨೧ ರಂದು ಭಾನುವಾರ ಜರುಗಲಿದೆ.
ಪಟ್ಟಣದ ಇಂಡಿ ರಸ್ತೆಯಲ್ಲಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರದ ದಾನಗೊಂಡ ಲೇಔಟ್‌ನಲ್ಲಿ ಆರಂಭಗೊಳ್ಳಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಮ್ಮಿಗನೂರ ಹಂಪಿ ಸಾವಿರದೇವರಮಠದ ವಾಮದೇವ ಮಹಾಂತಶ್ರೀ ಹಾಗೂ ಸಗರ ಒಕ್ಕಲಿಗರ ಹಿರೇಮಠದ ಮರುಳ ಮಹಾಂತಶ್ರೀಗಳು ವಹಿಸಲಿದ್ದಾರೆ.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಕೃಷಿ ಮಾರುಕಟ್ಟೆ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಪುಷ್ಪಾರ್ಚನೆ, ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅಧ್ಯಕ್ಷತೆ ವಹಿಸಲಿದ್ದಾರೆ.
ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆಯ ಜಿಲ್ಲಾಧ್ಯಕ್ಷ ಬಿ.ಎಂ .ಪಾಟೀಲ, ತಾಲ್ಲೂಕಾಧ್ಯಕ್ಷ ಗುರುರಾಜ ಆಕಳವಾಡಿ ಸಹಿತ ಸಮುದಾಯದ ಪ್ರಮುಖರು ಭಾಗವಹಿಸಲಿದ್ದಾರೆ. ಆದ್ದರಿಂದ ತಾಲ್ಲೂಕು ಹಾಗೂ ಮತಕ್ಷೇತ್ರದ ಎಲ್ಲ ಪಂಚಮಸಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಲು ಪ್ರಕಟಣೆ ತಿಳಿಸಿದೆ.
