ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ನಗರದ ಜ್ಞಾನಯೋಗಾಶ್ರಮದಲ್ಲಿ ಡಿಸೆಂಬರ್ ೨೩ ರಂದು ಬೆಳಿಗ್ಗೆ ೧೦ ರಿಂದ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿ,ಸಿಬ್ಬಂದಿ ಹೊರತುಪಡಿಸಿ, ಜಿಲ್ಲೆಯ ಎಲ್ಲ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಡಿಸೆಂಬರ್ ೨೧ರೊಳಗಾಗಿ ವಿಜಯಪುರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಶ್ರೀಮತಿ ಜಯಶ್ರೀ ಪಾಟೀಲ (ಮೊ: ೯೪೪೮೯೬೮೧೨೮) ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
