ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.
