Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ವಿವಿಧ ಕಲೆಗಳ ಅಭಿರುಚಿ ಹೊಂದಲು ಪ್ರೋತ್ಸಾಹಿಸಿ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ವಿವಿಧ ಕಲೆಗಳ ಅಭಿರುಚಿ ಹೊಂದಲು ಪ್ರೋತ್ಸಾಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಚಾಲನೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಲ್ಯದಲ್ಲಿಯೇ ಮಕ್ಕಳಿಗೆ ಅವರ ಆಸಕ್ತಿಯ ವಿವಿಧ ಕಲೆಗಳೆಡೆಗೆ ಆಸಕ್ತಿ ಹಾಗೂ ಅವುಗಳನ್ನು ರೂಢಿಸಿಕೊಳ್ಳಲು ಪಾಲಕರು ಪ್ರೋತ್ಸಾಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಯ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲೆಗಳು ಸೃಜನಶೀಲತೆ, ಕೌಶಲ್ಯ, ಮಾನಸಿಕ ಸ್ಥೆöÊರ್ಯ ಹಾಗೂ ಸೌಂದರ್ಯವನ್ನು ವ್ಯಕ್ತಪಡಿಸುತ್ತವೆ. ಇವು ಮನರಂಜನೆಯೊಂದಿಗೆ ಜೀವನಶೈಲಿ ಪ್ರತಿಬಿಂಬಿಸುತ್ತವೆ. ಮನುಷ್ಯನ ಭಾವನೆ, ಸಂಸ್ಕೃತಿ ಹಾಗೂ ಪರಂಪರೆಯ ಅಭಿವ್ಯಕ್ತಿಯಾಗಿವೆ. ಸಂಗೀತ, ನೃತ್ಯ ಮುಂತಾದ ಕಲೆಗಳು ಮನಸ್ಸಿಗೆ ನೆಮ್ಮದಿ ಹಾಗೂ ಆತ್ಮ ಸಂತೃಪ್ತಿ ನೀಡುತ್ತವೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆ ರೂಢಿಸಿಕೊಳ್ಳಬೇಕು. ವಿವಿಧ ಕಲಾ ಪ್ರಕಾರಗಳಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಸರ್ಕಾರ ಏರ್ಪಡಿಸುವ ಮೂಲಕ ತಮ್ಮ ಕಲಾ ಪ್ರತಿಭೆ ಗುರುತಿಸಲು ಅವಕಾಶ ಒದಗಿಸಿದೆ. ವಿವಿಧ ಕಲಾ ಪ್ರಕಾರಗಳ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಲಾ ಪ್ರತಿಭೆ ಪ್ರಸ್ತುತಪಡಿಸಿ ಎಂದು ಹೇಳಿದರು. ಕಲೆ ಮನುಷ್ಯನ ನೆಮ್ಮದಿ ಜೀವನಕ್ಕೆ ಪೂರಕವಾಗಿ ಸಹಕಾರಿಯಾಗಿದೆ. ನೃತ್ಯ, ಸಂಗೀತ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರಾವೀಣ್ಯತೆ ಹೊಂದಿ ಜಿಲ್ಲೆಯ ಕೀರ್ತಿ ತರಬೇಕು. ಜನಪದ ಹಾಡುಗಳು ಜನರ ಜೀವನಾಡಿಯಾಗಿವೆ. ಅವು ಮನೆ-ಮನಗಳಲ್ಲಿ ಹಾಸುಹೊಕ್ಕಾಗಿವೆ. ಜನಪದ ಸಾಹಿತ್ಯವು ಜನರ ಜೀವನದ ಅವಿಭಾಜ್ಯ ಅಂಗವಾಗಿದ್ದು, ತಮ್ಮ ಕೆಲಸ ಕಾರ್ಯಗಳೊಂದಿಗೆ ಹಾಡಿನ ಮೂಲಕ ತಮ್ಮ ದಣಿವನ್ನು ತಣಿಸಿಕೊಳ್ಳುವ ಜನಪದರು ನೀಡಿರುವ ಬಹುದೊಡ್ಡ ಕೊಡುಗೆಯಾಗಿದೆ. ಹಲಸಂಗಿ ಗೆಳೆಯರು ಜನಪದ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಹಿರಿಯ ರಂಗಭೂಮಿ ಕಲಾವಿದರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಲ್.ಬಿ.ಶೇಖ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ಶ್ರೀಮತಿ ರಾಜೇಶ್ವರಿ ಮೋಪಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಹಿರಿಯ ಕಲಾವಿದರು, ತೀರ್ಪುಗಾರರು, ಸ್ಪರ್ಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

“ನಮ್ಮ ನಾಡಿನ ಕಲೆ, ಸಂಸ್ಕೃತಿ ಅರಿಯಬೇಕು. ಮಗುವಿನಲ್ಲಿಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದೆ.”

– ಪಿ.ಎಸ್.ಕಡೇಮನಿ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರು, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.