Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉ.ಕ ಸಮಗ್ರ ಅಭಿವೃದ್ಧಿಗೆ ಕಾಳಜಿ ವಹಿಸಿ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಉ.ಕ ಸಮಗ್ರ ಅಭಿವೃದ್ಧಿಗೆ ಕಾಳಜಿ ವಹಿಸಿ :ಶಾಸಕ ರಾಜುಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಕೆ.ಕೆ.ಆರ್.ಡಿ.ಬಿ ಅಂತೆ ನಮಗೂ ಒಂದು ಬೋರ್ಡ್ ಮಾಡಿಕೊಡುವ ಅಗತ್ಯವಿದೆ. ಬೆಳಗಾವಿಯಲ್ಲಿ ನಡೆದ ಈ ಅಧಿವೇಶನ ಸಾರ್ಥಕವಾಗುತ್ತದೆ ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ`ಮಾತನಾಡಿದ ಅವರು, ಈ ಭಾಗದ ಜಲ್ವಂತ ಸಮಸ್ಯೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿ ಸರ್ಕಾರದ ಗಮನ ಸೆಳೆದರು.ಉತ್ತರ ಕರ್ನಾಟಕದಲ್ಲೇ ವಿಜಯಪುರ ಜಿಲ್ಲೆ ಅತಿ ಹಿಂದುಳಿದ ಜಿಲ್ಲೆಯಾಗಿದೆ. ಆದ್ದರಿಂದ ಜಿಲ್ಲೆ ಇನ್ನೂ ಸಾಕಷ್ಟು ಅಭಿವೃದ್ಧಿ ಆಗಬೇಕಿದೆ. ನಮ್ಮ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ವ್ಯವಸ್ಥೆ ಇಲ್ಲ. ಜಿಲ್ಲೆಯಿಂದ ಬೆಂಗಳೂರಿಗೆ ಪ್ರಯಾಣಿಸಲು ಸಾರ್ವಜನಿಕರಿಗೆ ಸರಿಯಾದ ರೈಲಿನ ವ್ಯವಸ್ಥೆ ಕೂಡ ಇಲ್ಲ. ಪ್ರಯಾಣಿಕರು ಬೆಂಗಳೂರಿಗೆ ತಲುಪಲು 9 ರಿಂದ 10 ಗಂಟೆಯವರೆಗೆ ಪ್ರಯಾಣಿಸಬೇಕಾಗುತ್ತದೆ. ಆದ್ದರಿಂದ ಸರಕಾರ ಆಲಮಟ್ಟಿಯಿಂದ ಚಿತ್ರದುರ್ಗ ಮಾರ್ಗವಾಗಿ ರೈಲು ಮಾರ್ಗ ಮಾಡಬೇಕೆಂಬುದು ಬಹು ಮುಖ್ಯ ಬೇಡಿಕೆಯಾಗಿದೆ ಎಂದರು.
ಈ ಸಲ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆಯಾಗಿರುವದರಿಂದ ರೈತರ ಹೊಲಗಳಿಗೆ ಹೋಗಲು ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಆ ರಸ್ತೆಗಳ ಸುಧಾರಣೆಗೆ ಜಿಲ್ಲಾ ಪಂಚಾಯತ್‌ಗೆ ಅನುದಾನ ನೀಡಿ ಎಂದು ಮನವಿ ಮಾಡಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಸರಕಾರ ವಿಮಾ ಪರಿಹಾರ ಬಿಡುಗಡೆ ಮಾಡಿದೆ, ಕೆಲವು ರೈತರಿಗೆ ಬಂದಿದೆ. ಇನ್ನೂ ಕೆಲವು ರೈತರಿಗೆ ಬಂದಿಲ್ಲ. ಅದನ್ನು ಸಹ ಶೀಘ್ರದಲ್ಲಿಯೇ ಸರಿಪಡಿಸಬೇಕು. ರೈತರು ತಮ್ಮ ಹೊಲದಲ್ಲಿ ಕೆನಾಲ್‌ಳಿಗೆ ತಮ್ಮ ಜಮೀನುಗಳನ್ನು ಕಳೆದುಕೊಂಡ ರೈತರಿಗೆ ಕೋರ್ಟ್‌ನಿಂದ ಅವಾರ್ಡ್ ಆದರೂ ಇನ್ನೂವರೆಗೂ ಅವರಿಗೆ ಕೂಡಲೇ ಹಣ ಬಿಡುಗಡೆ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಜಮೀನು ಕಳೆದುಕೊಂಡ ರೈತರಿಗೆ ಬಿಡುಗಡೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ತಮ್ಮ ಮತಕ್ಷೇತ್ರ ದೇವರಹಿಪ್ಪರಗಿ ನೂತನ ತಾಲೂಕ ಆಗಿದೆ. ಪ್ರಜಾಸೌಧದಲ್ಲಿ ಎಲ್ಲ ಕಚೇರಿಗಳು ಇನ್ನೂವರೆಗೂ ಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ. ಅದನ್ನು ಸಹ ಶೀಘ್ರ ಸರಿಪಡಿಸಬೇಕು ಎಂಬುದೂ ಸೇರಿದಂತೆ ಮತಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದರು.
ಕಂದಾಯ ಸಚಿವರು ಹೇಳಿದಂತೆ ರೂ.50 ಬಾಂಡನಲ್ಲಿ ಅಕ್ರಮವಿರುವದನ್ನು ಸಕ್ರಮ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ ರೈತರಿಗೆ ಆರ್.ಆರ್. ನಂಬರ್ ಸಹ ನೀಡಲಾಗಿದೆ. ಆರ್.ಆರ್. ನಂಬರ್ ಇದ್ದವರಿಗೂ ಹಣ ಕಟ್ಟುವಂತೆ ಹೇಳಲಾಗುತ್ತಿದೆ. ಇದರ ಬಗ್ಗೆ ಸಚಿವರು ಗಮನ ಹರಿಸಬೇಕೆಂದರು.
ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲ್ಯಾಬ್ ಟೆಕ್ನಿಸಿನ್ ಸೇರಿದಂತೆ ಅನೇಕ ಸಣ್ಣ ಹುದ್ದೆಯಲ್ಲಿ ಕಾರ್ಯನಿರ್ವಹಿಸುವವರನ್ನು ರದ್ದುಪಡಿಸಿ ಮತ್ತೆ ಹೊಸದಾಗಿ ಬೇರೆಯವರನ್ನು ಇಲಾಖೆಯ ನಿರ್ದೇಶಕರು ತೆಗೆದುಕೊಳ್ಳಲು ಹೊರಟಿದ್ದಾರೆ. ಇದರಿಂದಾಗಿ 36 ಸಾವಿರ ಜನರು ಬೀದಿಗೆ ಬರುತ್ತಾರೆ. ಇದರ ಬಗ್ಗೆ ಆರೋಗ್ಯ ಸಚಿವರು ಗಮನ ಹರಿಸಬೇಕು. ಬಿಪಿಎಲ್ ಕಾರ್ಡ್ ಹೊಂದಿದವರು ಹೃದಯಾಘಾತಕ್ಕೆ ಒಳಗಾದ ಸಂದರ್ಭದಲ್ಲಿ ಆ ಕಾರ್ಡ್ ಜನರೇಟ್ ಆಗಬೇಕೆಂದರೆ ಎರಡು-ಮೂರು ದಿನ ಬೇಕಾಗುತ್ತದೆ. ಒಂದು ವೇಳೆ ದಾಖಲಾದ ರೋಗಿ ಮೃತಪಟ್ಟರೆ ಅವರು ಹಣ ಕಟ್ಟಬೇಕಾಗುತ್ತದೆ. ಮೊದಲೇ ಅವರು ಬಡವರಾಗಿರುತ್ತಾರೆ. ಅವರಿಗೆ ಇದು ಹೊರೆಯಾಗುತ್ತದೆ. ಇದನ್ನು ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರು ಆಸ್ಪತ್ರೆಗೆ ದಾಖಲಾದರೆ ಕೂಡಲೇ ಅದು ಜನರೇಟ ಆಗುವಂತೆ ಕ್ರಮ ತೆಗೆದುಕೊಳ್ಳುವಂತೆ ಮಾಡಬೇಕಿದೆ ಎಂದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.