Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು
(ರಾಜ್ಯ ) ಜಿಲ್ಲೆ

ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಡೀಮ್ಡ್ ವಿವಿ 13ನೇ ಘಟಿಕೋತ್ಸವದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ.ಕೆ.ರಮೇಶ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದಲ್ಲಿ ವೈದ್ಯಕೀಯ ಸೇವೆ ಹೊಸ ಮಜಲನ್ನು ತಲುಪಿದ್ದು, ರೋಗಗಳಿಗೆ ಗುಣಮಟ್ಟದ ಸೇವೆ ತಲುಪಿಸಲು ಅತ್ಯಾಧುನಿಕ ತಂತ್ರಜ್ಞಾನ ಸದ್ಬಳಕೆಯಾಗುತ್ತಿದೆ ಎಂದು ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ ಹೇಳಿದ್ದಾರೆ.
ಶುಕ್ರವಾರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು.
ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಆವರಣ ಹಚ್ಚು ಹಸಿರಿನಿಂದ ಕೂಡಿದ್ದು, ವಿದ್ಯಾಭ್ಯಾಸಕ್ಕೆ ಹೇಳಿ ಮಾಡಿಸಿದಂತಿದೆ. ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಈಗ ವೃತ್ತಿ ಜೀವನದ ಹೊಸದೊಂದು ಅಧ್ಯಾಯ ಪ್ರಾರಂಭವಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಇನ್ನೂ ಹೆಚ್ಚಾಗಿ ಅಧ್ಯಯನ ನಿರತರಾಗಬೇಕು. ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ಯುವವೈದ್ಯರು ಸಹಾನುಭೂತಿ ಮತ್ತು ಕರುಣೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು ಎಂದು ಅವರು ಹೇಳಿದರು.
ದೇಶದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂಟರ್ನೆಟ್ ಸುಧಾರಣೆಯಿಂದಾಗಿ ರೋಗಿಗಳನ್ನು ದೂರದಿಂದಲೇ ಟೆಲಿಮೆಡಿಸೀನ್ ಮೂಲಕ ಚಿಕಿತ್ಸೆ ನೀಡಬಹುದಾಗಿದೆ. ಡಿಜಿಟಲ್ ವೇದಿಕೆಗಳು ರೋಗಿಗಳು ವೈದ್ಯರನ್ನು ಸುಲಭವಾಗಿ ತಲುಪಲು ನೆರವಾಗಿವೆ. ಕೃತಕ ಬುದ್ದಮತ್ತೆ(ಆರ್ಟಿಫಿಸಿಯಲ್ ಇಂಟಲಿಜೆನ್ಸ್) ಬಳಕೆಯಿಂದಾಗಿ ರೋಗಗಳ ಗುಣಲಕ್ಷಣಗಳನ್ನು ನಿಖರವಾಗಿ ಗುರುತಿಸಿ ಚಿಕಿತ್ಸೆ ನೀಡಲು ನೆರವಾಗಿವೆ. ರೊಬೊಟಿಕ್ ತಂತ್ರಜ್ಞಾನ ಸರಳ, ಸುಲಭ, ಕಡಿಮೆ ವೆಚ್ಚ ಮತ್ತು ಹೆಚ್ಚು ಗಾಯವಿಲ್ಲದೇ ಶಸ್ತ್ರಚಿಕಿತ್ಸೆ ನಡೆಸಲು ವರದಾನವಾಗಿದೆ. ಜಿನೊಮಿಕ್ಸ್ ಮತ್ತು ಪ್ರಿಸೀಶನ್ ಮೆಡಿಸೀನ್ ತಂತ್ರಜ್ಞಾನ, ನ್ಯಾನೊಟೆಕ್ನಾಲಜಿ, ರಿಜನರೇಟಿವ್ ಮೆಡಿಸೀನ್ ಮತ್ತು ಸ್ಟಮ್ ಸೆಲ್ ಥೆರಪಿ, ಹೆಲ್ತ್ ಕೇರ್ ಡಾಟಾ ವಿಶ್ಲೇಷಣೆ, ಮೆಡಿಕಲ್ ಡಿವೈಸಿಸ್ ಮತ್ತು ವಿಯರೇಬಲ್ ಟೆಕ್ನಾಲಜಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಗಳ ತ್ವರಿತ ಪತ್ತೆ, ಚಿಕಿತ್ಸೆ ಮತ್ತು ರೋಗಗಳಿಂದ ಗುಣಮಖರಾಗಲು ಅನುಕೂಲ ಒದಗಿಸಿವೆ. ಹೀಗಾಗಿ ಯುವ ವೈದ್ಯರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೆರವಾಗಬೇಕು. ಮೊಬೈಲ್ ಮತ್ತು ಅಂತರ್ಜಾಲ ಬಳಕೆ ಗೀಳಿನಿಂದ ಹೊರ ಬರಬೇಕು. ತಂತ್ರಜ್ಞಾನದ ಸದ್ಭಳಕೆಯಾಗಬೇಕು. ವೈದ್ಯರು ಸಂಶೋಧನೆ ನಿರತರಾಗಿ ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿವಿ ಪ್ರಭಾರ ಕುಲಪತಿ ಡಾ. ಅರುಣ ಚಂ. ಇನಾಮದಾರ ವಾರ್ಷಿಕ ವರದಿ ಮಂಡಿಸಿದರು. ಕಳೆದ ಒಂದು ವರ್ಷದಲ್ಲಿ ವಿವಿಯಲ್ಲಿ ನಡೆದ ಸಂಶೋಧನೆಗಳು, ಲಭಿಸಿದ ಮಾನ್ಯತೆಗಳು, ಸಿಕ್ಕ ಪುರಸ್ಕಾರಗಳು, ಮಾನ್ಯತೆಗಳು, ವೈದ್ಯರ ಸಾಧನೆಗಳು, ಮಾಡಿಕೊಳ್ಳಲಾದ ಹೊಸ ಒಡಂಬಡಿಕೆಗಳು, ಮುಂದೆ ಕೈಗೊಳ್ಳಲಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ ಘಟಿಕೋತ್ಸವದ ಪದವಿ ಪ್ರಧಾನ ಮಾಡಿದರು.
ಇದೇ ವೇಳೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಯಿತು.
ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ವ್ಯಾಪ್ತಿಯಲ್ಲಿರುವ ನಾನಾ ಅಂಗ ಸಂಸ್ಥೆಗಳ ಮತ್ತು ಅವುಗಳ ಸಾಧನೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ, ಡೀಮ್ಡ್ ವಿವಿ ಕುಲಾಧಿಪತಿ ಬಿ. ಎಂ. ಪಾಟೀಲ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಕ ಡಾ. ಶಶಿಧರ ದೇವರಮನಿ, ವೈದ್ಯಕೀಯ ವಿಭಾಗದ ಡೀನ್ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಸೈನ್ಸ್ ಮತ್ತು ಟೆಕ್ನಾಲಜಿ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ ಹಾಗೂ ಕಾನೂನು ವಿಭಾಗದ ಡೀನ್ ಡಾ. ರಘುವೀರ್ ಜಿ. ಕುಲಕರ್ಣಿ, ಡಾ. ಸಚ್ಚಿದಾನಂದ, ಡಾ. ಶ್ರೀನಿವಾಸ ಬಳ್ಳಿ, ಡಾ. ಸ್ನೇಹಾ ಜವಳಕರ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಅಶೋಕ ವಾರದ, ಡಾ.ಶ್ರೀಶೈಲ ಗುಡಗಂಟಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸ್ವಾಗತಿಸಿದರು. ಡಾ. ಚಂದ್ರಿಕಾ ದೊಡಿಹಾಳ, ಡಾ. ಆರ್. ವಿ. ಕುಲಕರ್ಣಿ, ಡಾ. ಎಂ. ಎಂ. ಪಾಟೀಲ ಪರಿಚಯಿಸಿದರು.ಡಾ. ತನುಜಾ ಪಟ್ಟಣಕರ, ಡಾ. ವೀಣಾ ಹರವಾಳಕರ ಹಾಗೂ ಡಾ. ಸ್ಮೀತಾ ಮಂಗಳಗಿರಿ ನಿರೂಪಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರದಾನ

ಈ ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರದಾನ ಮಾಡಲಾಯಿತು. ಅವುಗಳಲ್ಲಿ 11 ಪಿ.ಎಚ್.ಡಿ., 3 ಎಂ.ಸಿಎಚ್(ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್ಗಳು, 156 ಎಂಬಿಬಿಎಸ್ ಪದವಿಗಳು, 10 ಸ್ನಾತಕೋತ್ತರ ಅಲೈಡ್ ಹೆಲ್ತ್ ಪದವಿಗಳು, 19 ವಿಜ್ಞಾನ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿಗಳು ಮತ್ತು 13 ಬ್ಯಾಚುಲರ್ ಆಫ್ ಫಿಸಿಯೋಥೆರಪಿ 46 ಅಲೈಡ್ ವಿಜ್ಞಾನ ಪದವಿಗಳು ಸೇರಿವೆ.

ಚಿನ್ನದ ಪದಕಗಳ ಪ್ರತಿಭಾವಂತ ವಿದ್ಯಾರ್ಥಿಗಳು

ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಡಾ. ನರ್ಲಾ ಸುರೇಖಾ ಮತ್ತು ಡಾ. ಶಂಕರ್ ನಾರಾಯಣನ್ ಆರ್ ತಲಾ ಎರಡು ಚಿನ್ನದ ಪದಕಗಳನ್ನು ಪಡೆದರೆ, ಪದವಿ ವೈದ್ಯಕೀಯ ವಿಭಾಗದಲ್ಲಿ ಡಾ. ಯಶ ಆರ್ಯ ಐದು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ನಿಶ್ಚಿತಾ ಸಿ. ರಾಜ ಮೂರು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ಸಲೋನಿ ವರ್ಮಾ ಎರಡು ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಡಾ. ಶಿರೀಷಾ ಎಂ. ಎಸ್. ಎರಡು ಚಿನ್ನದ ಪದಕಗಳನ್ನು ಪಡೆದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.