Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವರಿಂದ ಆರ್ಥಿಕ ನೆರವು
(ರಾಜ್ಯ ) ಜಿಲ್ಲೆ

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವರಿಂದ ಆರ್ಥಿಕ ನೆರವು

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ ಸಚಿವ ಎಂ.ಬಿ.ಪಾಟೀಲ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ದಾರೆ.
ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರು. ಈ ಮಾಹಿತಿ ತಿಳಿದ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಇಬ್ಬರೂ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಾಗಿರುವ ಕಾಲೇಜು ಪ್ರವೇಶ ಶುಲ್ಕ, ಊಟ ಹಾಗೂ ವಸತಿ ಬೇಕಾಗುವ ಒಟ್ಟು ಮೊತ್ತವನ್ನು ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ಸಚಿವ ಎಂ‌. ಬಿ. ಪಾಟೀಲ ಅವರು ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದರು.
ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ-1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 223424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾಳೆ. ಮೂಲತಃ ಸಿಂದಗಿ ತಾಲೂಕಿನ ಹಿಕ್ಕನಗುತ್ತಿಯ ಮತ್ತು ಈಗ ವಿಜಯಪುರ ನಗರದಲ್ಲಿ ವಾಸಿಸುವ ಮಂಜುನಾಥ ಲಕ್ಷ್ಮಣ ಗೊಟಗುಣಕಿ ನೀಟ್ ನಲ್ಲಿ 76372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ.
ದಿವ್ಯಾ ಹನಮಂತ ರಾಠೋಡಗೆ ಕೋರ್ಸು ಪೂರ್ಣಗೊಳಿಸಲು ಒಟ್ಟು ರೂ. 9,98,484 ಅಗತ್ಯವಿದ್ದು, ಕೋರ್ಸಿನ ಮೊದಲ ವರ್ಷಕ್ಕೆ ಅಗತ್ಯವಾದ ರೂ. 2,49,621 ಹಣದ ಚೆಕ್ ನ್ನು ಸಚಿವರು ವಿತರಿಸಿದರು. ಅದೇ ರೀತಿ ವಿಜಯಪುರ ನಗರದ ನಿವಾಸಿ ಮಂಜುನಾಥ ಗೊಟಗುಣಕಿಗೆ ಕೋರ್ಸು ಪೂರ್ಣಗೊಳಿಸಲು ರೂ. 6.32 ಲಕ್ಷ ಅಗತ್ಯವಿದ್ದು, ಕೊರ್ಸಿನ ಪ್ರಥಮ ವರ್ಷಕ್ಕೆ ಅಗತ್ಯವಾದ ರೂ. 1.58 ಲಕ್ಷದ ಮೊತ್ತದ ಮೊಲದ ಕಂತಿನ ಚೆಕ್ ನ್ನು ವಿತರಿಸಿದರು.
ಬಳಿಕ ಮಾತನಾಡಿದ ಸಚಿವರು, ಬಿ.ಎಲ್.ಡಿ.ಇ ಸಂಸ್ಥೆಯಿಂದ ಈವರೆಗೆ ಪ್ರತಿ ವರ್ಷ ನೀಟ್ ಪರೀಕ್ಷೆಯಲ್ಲಿ ಸರಕಾರಿ ಕೋಟಾದಡಿ ಪಾಸಾದ ಸುಮಾರು ಹತ್ತು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಕೋರ್ಸ್ ಪ್ರವೇಶ ಶುಲ್ಕ, ವಸತಿ ಹಾಗೂ ಊಟದ ಶುಲ್ಕವನ್ನು ನೀಡಲಾಗುತ್ತದೆ. ಇದರಿಂದ ಬಡವರ ಮಕ್ಕಳು ವೈದ್ಯರಾಗುವ ಕನಸಿಗೆ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ನೆರವಾಗಲಾಗುತ್ತಿದೆ ಎಂದು ತಿಳಿಸಿದರು.
ಅಲ್ಲದೇ, ನೆರವು ಪಡೆದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಸಾಧನೆ ಮಾಡಬೇಕು. ಜನಪರ ವೈದ್ಯರಾಗಿ ರೋಗಿಗಳ ಸೇವೆಯ ಮೂಲಕ ಬಸವನಾಡು ವಿಜಯಪುರ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ರಜಿಸ್ಟ್ರಾರ ಡಾ. ಆರ್. ವಿ ಕುಲಕರ್ಣಿ, ಸಂಸ್ಥೆ ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

ಸಚಿವರಿಗೆ ಸದಾ ಋಣಿಯಾಗಿರುತ್ತೇವೆ

ಚೆಕ್ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ, ಮೊದಲಿಗೆ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಂದೆ ಹನಮಂತ ರಾಠೋಡ ಅವರಿಗೆ ಮೂರು ವರ್ಷದ ಹಿಂದೆ ಕ್ಯಾನ್ಸರ್ ಆಗಿತ್ತು. ಈಗ ಹೋಟೇಲಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಜ್ಯೋತಿ ಮನೆಗೆಲಸ ಮಾಡುತ್ತಿದ್ದಾರೆ. ಮನೆಯಲ್ಲಿ ಆರ್ಥಿಕ ಸಂಕಷ್ಟವಿದೆ. ಸಚಿವರು ಸಹಾಯ ಮಾಡುವ ಮೂಲಕ ವೈದ್ಯಳಾಗಬೇಕೆಂಬ ಕನಸು ನನಸಾಗಿಸುತ್ತಿದ್ದಾರೆ. ಮುಂದೆ ಎಂ.ಡಿ ಓದಿ ಕ್ಯಾನ್ಸರ್ ವೈದ್ಯಳಾಗುವ ಗುರಿ ಇದೆ ಎಂದರು.
ವಿದ್ಯಾರ್ಥಿನಿ ತಾಯಿ ಜ್ಯೋತಿ ಹನಮಂತ ರಾಠೋಡ ಮಾತನಾಡಿ, ಸಚಿವರು ಬಡವರಿಗೆ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಕೊಡುಗೈ ದಾನಿಯಾಗಿದ್ದಾರೆ. ಅವರಿಗೆ ಸದಾ ಋಣಿಯಾಗಿರುತ್ತೇವೆ ಎಂದು ಹೇಳಿದರು.

ಸಚಿವ ಎಂ.ಬಿ.ಪಾಟೀಲ ನಮ್ಮ ಪಾಲಿಗೆ ಆಪದ್ಭಾಂಧವರು

ವಿಜಯಪುರ ನಗರದ ನಿವಾಸಿ ಮಂಜುನಾಥ ಲಕ್ಷ್ಮಣ ಗೊಟಗುಣಕಿ ಮಾತನಾಡಿ, ತಂದೆ ಲಕ್ಷ್ಮಣ ಗೊಟಗುಣಕಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಭಾರತಿ ಮನೆಗೆಲಸ ಮಾಡುತ್ತಿದ್ದಾರೆ. ಅಣ್ಣ ಮಲ್ಲಿಕಾರ್ಜುನ ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಗೋಡೆಗಳಿಗೆ ನೀರು ಹಾಕುತ್ತ ವಿಜಯಪುರ ನಗರದ ಖಾಸಗಿ ಶಾಲೆಯಲ್ಲಿ ಬಿ.ಎಡ್ ಓದುತ್ತಿದ್ದಾನೆ. ನಾನು ನೀಟ್ ಪಾಸಾಗಿ ಸರಕಾರಿ ಕೋಟಾದಲ್ಲಿ ಆಯ್ಕೆಯಾದರೂ ಹಣದ ಕೊರತೆಯಿಂದಾಗಿ ಸಂಕಷ್ಟದಲ್ಲಿದ್ದೆ. ಆದರೆ ಸಚಿವ ಎಂ.ಬಿ.ಪಾಟೀಲ ಅವರು ನಮ್ಮ ಪಾಲಿಗೆ ಆಪದ್ಭಾಂಧವರಾಗಿದ್ದಾರೆ. ನಾನು ವೈದ್ಯನಾಗಬೇಕೆಂಬ ಕನಸು ಈಡೇರಲು ಆರ್ಥಿಕ ನೆರವು ನೀಡಿದ್ದಾರೆ. ಅವರ ಉಪಕಾರವನ್ನು ಎಂದೂ ಮರೆಯುವುದಿಲ್ಲ ಎಂದು ತಿಳಿಸಿದರು.
ವಿದ್ಯಾರ್ಥಿಯ ತಂದೆ ಲಕ್ಷ್ಣಣ ಗೊಟಗುಣಕಿ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರಂಥ ಹೃದಯವಂತರನ್ನು ಎಲ್ಲಿಯೂ ನೋಡಿಲ್ಲ. ಬಡವರು, ಪ್ರತಿಭಾವಂತರ ಪಾಲಿಗೆ ಅವರು ದೇವರಾಗಿದ್ದಾರೆ. ನನ್ನ ಮಗ ಡಾಕ್ಟರ್ ಆಗಬೇಕೆಂಬ ಕನಸು ನನಸಾಗಲು ಕಾರಣರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.