ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಸೈನಿಕ ಶಾಲೆಯಲ್ಲಿ ಒಪ್ಪಂದದ ಆಧಾರದ ಮೇಲೆ ವಿವಿಧ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಶಾಲೆಯ ವೆಬ್‌ಸೈಟ್ www.ssbj.inನಿಂದ ಡೌನ್‌ಲೋಡ್ ಮಾಡಲಾದ ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ದೃಢೀಕರಿಸಿದ ದಾಖಲೆಗಳನ್ನು ಪ್ರಾಂಶುಪಾಲ ಸೈನಿಕ ಶಾಲೆ ವಿಜಯಪುರ-೫೮೬೧೦೮ ಇವರಿಗೆ ದಿನಾಂಕ : ೦೫-೦೧-೨೦೨೬ರೊಳಗೆ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ದೂ: ೦೮೩೫೨-೨೫೦೯೧೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
