Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ
(ರಾಜ್ಯ ) ಜಿಲ್ಲೆ

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ೧೦೨ ನೂತನ ನಗರ ಸಾರಿಗೆ ವಾಹನಗಳಿಗೆ ಚಾಲನೆ | ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ ೯೦೦೦ ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹೇಳಿದರು.
ನಗರದ ದರಬಾರ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ೧೦೨ ನೂತನ ನಗರ ಸಾರಿಗೆ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ನಗರಗಳ ವ್ಯಾಪ್ತಿ ವೃದ್ಧಿಸುತ್ತಿದೆ. ಬೆಳೆಯುತ್ತಿರುವ ನಗರಗಳಲ್ಲಿನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ ೧೧೨ ಬಸ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸ್ತುತವಾಗಿ ನೂತನ ೧೦೨ ಹೊಸ ನಗರ ಸಾರಿಗೆ ವಾಹನ ಬಸ್‌ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ ೨೭ ಬಸ್‌ಗಳು ವಿಜಯಪುರ ವಿಭಾಗಕ್ಕೆ ಹಂಚಿಕೆಯಾಗಿದ್ದು ಇಂದು ನೂತನ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.
ಮುಂದಿನ ಎರಡು ತಿಂಗಳಲ್ಲಿ ೨೦ ನಾನ್ ಎಸಿ ಸ್ಲೀಪರ್, ೨೦ ಎಸಿ ಸ್ಲೀಪರ್ ಹಾಗೂ ೧೬ ಎ.ಸಿ. ಸೀಟರ್ ಸೇರಿದಂತೆ ಒಟ್ಟು ೫೬ ಹೊಸ ವಾಹನಗಳ ಖರೀದಿಗೆ ಆದೇಶ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಬಸ್‌ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇದರಿಂದ ನಗರದಿಂದ ನಗರಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಕೆಕೆಆರ್‌ಟಿಸಿ ೪೦೦ ಬಸ್‌ಗಳ ಖರೀದಿ ಪ್ರಕ್ರಿಯೆ ಜಾರಿಯಲ್ಲಿದ್ದು, ಮುಂದಿನ ಎರಡ್ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ೨೦೦೦ ಬಸ್‌ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಈ ಪೈಕಿ ಕೆಕೆಆರ್‌ಟಿಸಿಗೆ ೪೦೦ ಬಸ್‌ಗಳನ್ನು ಹಾಗೂ ಕೆಎಸ್‌ಆರ್‌ಟಿಸಿಗೆ ೯೦೦, ವಾಯುವ್ಯ ಕರ್ನಾಟಕ ಸಾರಿಗೆಗೆ ೭೦೦ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು ಪಿಎಂ ಇಸೇವಾ ಯೋಜನೆಯಡಿ ೨೨೫ ವಿದ್ಯುತ್ ಚಾಲಿತ್ ಬಸ್‌ಗಳನ್ನು ಖರೀದಿಸಲಾಗುತ್ತಿದ್ದು, ಈ ಪೈಕಿ ಕಲ್ಬುರ್ಗಿ ೧೦೦, ವಿಜಯಪುರಕ್ಕೆ ೭೫ ಹಾಗೂ ಬಳ್ಳಾರಿಗೆ ೫೦ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವಾಯ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಾ ಬಿ., ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸೇರಿದಂತೆ ಪಾಲಿಕೆ ವಿವಿಧ ಸದಸ್ಯರು, ವಿವಿಧ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಭಿವೃದ್ಧಿಯಲ್ಲಿ ಸಾರಿಗೆ ಪಾತ್ರ ಬಹುಮುಖ್ಯ :ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಒಂದು ನಗರ ಅಥವಾ ಪ್ರದೇಶದ ಅಭಿವೃದ್ಧಿಯಲ್ಲಿ ಸಾರಿಗೆ ಪಾತ್ರ ಬಹುಮುಖ್ಯವಾದದ್ದು, ಆ ನಿಟ್ಟಿನಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ವಿಜಯಪುರ ಸಾರಿಗೆ ವ್ಯವಸ್ಥೆ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹುಮುಖ್ಯವಾಗಿದ್ದು, ವಿಜಯಪುರದ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರ ಆಡಳಿತಾತ್ಮಕವಾಗಿ ಬೆಳಗಾವಿ ವಿಭಾಗಕ್ಕೆ ಸೇರಿದರೂ ಸಹ ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರ್ಪಡೆಯಾಗಿದೆ. ಆದ್ದರಿಂದ ವಿಜಯಪುರ ಜಿಲ್ಲೆಗೆ ಸಾಮಾನ್ಯ ಅನುದಾನದಲ್ಲಿ ಹೆಚ್ಚಿನ ಆದ್ಯತೆ ನೀಡುವಂತೆ ಈ ಸಂದರ್ಭದಲ್ಲಿ ಅವರು ಕೋರಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಾಮಾನ್ಯ ಅನುದಾನ ಒದಗಿಸಿ ಅಭಿವೃದ್ದಿ ಕೈ ಜೋಡಿಸುವಂತೆ ಮನವಿ ಮಾಡಿಕೊಂಡ ಅವರು, ರಾಜ್ಯದಲ್ಲಿನ ಬಸ್‌ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲಿಡುವ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸಾರಿಗೆ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ಮೀಸಲಿಡಲು ಕ್ರಮ ವಹಿಸುವಂತೆ ಅವರು ಸಚಿವರಲ್ಲಿ ಕೋರಿಕೊಂಡರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ

ಓಲೇಮಠಕ್ಕೆ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ
    In (ರಾಜ್ಯ ) ಜಿಲ್ಲೆ
  • ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಓಲೇಮಠಕ್ಕೆ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ
    In (ರಾಜ್ಯ ) ಜಿಲ್ಲೆ
  • ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ
    In (ರಾಜ್ಯ ) ಜಿಲ್ಲೆ
  • ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.