ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತಾಲೂಕಿನ ಕುಮಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು. ಶಾರದಾ ಬಟವಾಲ ಮಿಮಿಕ್ರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ಈ ವಿದ್ಯಾರ್ಥಿನಿ ಸಾಧನೆಯನ್ನು ಮಾಡಿದ್ದಾರೆ
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು ಹಾಗೂ ಮುಖ್ಯ ಗುರುಗಳು ಸರ್ವ ಸಿಬ್ಬಂದಿ ವರ್ಗದವರು ಹಾಗೂ ಊರಿನ ಪ್ರಮುಖ ಗಣ್ಯರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿನಿಯ ಸಾಧನೆ ಹೇಗೆ ಮುಂದುವರೆಯಲೆಂದು ಹಾರೈಸಿದ್ದಾರೆ.

