ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಸಿಂದಗಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಹೆಗ್ಗೆರೇಶ್ವರ ದೇವಸ್ಥಾನ, ನಗರಸಭೆ, ಕಾಳಿಕಾದೇವಿ ವಿಶ್ವಕರ್ಮ ಸಮಾಜ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಡಾ.ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ೨೦೨೨ನೇ ವ್ಯಸನಮುಕ್ತ ಶಿಬಿರದ ಸಮಾರೋಪ ಸಮಾರಂಭವನ್ನು ಡಿ.೨೩ರಂದು ಬೆಳಿಗ್ಗೆ ೧೨ಗಂಟೆಗೆ ಹೆಗ್ಗೆರೇಶ್ವರ ದೇವಸ್ಥಾನ ಸಬಾಭವನದಲ್ಲಿ ಜರುಗಲಿದೆ ಎಂದು ಎಂದು ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪೂರ ತಿಳಸಿದ್ದಾರೆ.
ಸಿಂದಗಿ ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ, ಸಿಂದಗಿ ತಾಲೂಕು ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೋರಗಿ-ಪುರದಾಳ ವಿಶ್ವರಾಧ್ಯ ಶ್ರೀಮಠದ ತಪೋರತ್ನಂ ಮಹಾಲಿಂಗೇಶ್ವರ ಸ್ವಾಮಿಗಳು ವಹಿಸುವರು. ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ನೇರವೇರಿಸುವರು. ಅಧ್ಯಕ್ಷತೆಯನ್ನು ಅಶೋಕ ಅಲ್ಲಾಪೂರ ವಹಿಸಿಕೊಳ್ಳಲಿದ್ದಾರೆ. ನವಜೀವನ ಸಮಿತಿಯವರಿಗೆ ದಾಖಲಾತಿ ಹಸ್ತಾಂತರವನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸದಲಾಪೂರ ಮಾಡುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯಾಧ್ಯಕ್ಷ ನಟರಾಜ ಬಾದಾಮಿ, ದಿನೇಶ ಪೂಜಾರಿ, ಸೋಮನಗೌಡ ಪಾಟೀಲ(ಅಪ್ಪುಗೌಡ), ಎಂ.ಎಂ.ಗಿರಗಾಂವ್, ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ, ಆಕ್ಸ್ಪರ್ಡ್ ಶಾಲೆಯ ಅಧ್ಯಕ್ಷ ಪ್ರಕಾಶ ಚೌಧರಿ ಇರಲಿದ್ದಾರೆ ಎಂದು ಮೇಲ್ವಿಚಾರಕ ಬಾಬುರಾವ ಗೋಣಿ ತಿಳಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ ಸುತಾರ, ಯೋಗಾ ಶಿಕ್ಷಕ ಶೇಖರ ಪಾಟೀಲ, ಕರೆಪ್ಪ ಪೂಜಾರಿ ಸೇರಿದಂತೆ ಇತರರು ಇದ್ದರು.

