ವಿಜಯಪುರ: ಹಿರಿಯ ನಾಗರಿಕರು ಉತ್ತಮ ಅಹಾರ ಪದ್ದತಿ ಅಳವಡಿಸಿಕೊಂಡು ಅಗತ್ಯಕ್ಕೆ ತಕ್ಕಂತೆ ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಸದೃಡವಾಗಿ ಇಟ್ಟುಕೊಳ್ಳಬಹುದು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್ ಆರ್ಯುವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.
ಕಾಲೇಜಿನಲ್ಲಿ ಪಂಚಕರ್ಮ ವಿಭಾಗ, ಎನ್. ಎಸ್. ಎಸ್ ಘಟಕ ಹಾಗೂ ಲಯನ್ಸ್ ಕ್ಲಬ್ ಹಿರಿಯ ನಾಗರಿಕರ ವೇದಿಕೆ ಸಂಯುಕ್ತಾಶ್ರಯದಲ್ಲಿ ಗುರುವಾರ ವಿಶ್ವ ಸಂಧಿವಾತ ದಿನ ಮತ್ತು ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಮಂಡಿ ನೋವು ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರು ತಾವು ಸೇವಿಸುವ ಅಹಾರದ ಬಗ್ಗೆ ಗಮನ ಹರಿಸಬೇಕು. ಹಿತವಾಗಿ ಮತ್ತು ಮಿತವಾಗಿ ಆಹಾರ ಸೇವಿಸಬೇಕು. ನಾನಾ ಕಾಯಿಲೆಗಳಿಗೆ ಆಯುರ್ವೇದ ಪದ್ದತಿಯಲ್ಲಿ ಸಾಕಷ್ಟು ಔಷಧಿ ಲಭ್ಯವಿವೆ. ವೈದ್ಯರ ಸಲಹೆಯ ಮೇರೆಗೆ ಅವುಗಳನ್ನು ಬಳಸುವುದರಿಂದ ಆರೋಗ್ಯವನ್ನು ಸದೃಡವಾಗಿ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದರು.
ಲಯನ್ಸ್ ಕ್ಲಬ್ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಡಾ. ಎನ್. ಬಿ. ದೇಸಾಯಿ ಕಾರ್ಯಕ್ರಮದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರೋ. ಎ. ಎಸ್. ಕೋರಿ, ಪಂಚಕರ್ಮ ವಿಭಾಗದ ಡಾ. ರವೀಂದ್ರಸಿಂಗ್ ರಜಪೂತ, ಡಾ. ದೀಪಾಂಜಲಿ ಟಿ, ಎನ್. ಎಸ್. ಎಸ್ ಘಟಕದ ಯೋಜನಾಧಿಕಾರಿ ಡಾ. ರಾವುಸಾಹೇಬ ದೇಶಮುಖ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಹಿರಿಯ ನಾಗರಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
Subscribe to Updates
Get the latest creative news from FooBar about art, design and business.
Related Posts
Add A Comment

