ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ವಲಯ ಹಾಗೂ ಗ್ರಾಮೀಣ ವಲಯ ವ್ಯಾಪ್ತಿಯಲ್ಲಿ ಬರುವ ಮೂರು ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾತಿಗಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.
ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಗರ ವಲಯದ ಅಫಜಲಪುರ ಟಕ್ಕೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.49, ಕೆ.ಎಚ್.ಬಿ ಕಾಲೊನಿಯ ಶಾಸಕರ ಹಿರಿಯ ಪ್ರಾಥಮಿಕ ಶಾಲೆ ನಂ.24 ಹಾಗೂ ಗ್ರಾಮೀಣ ವಲಯದಲ್ಲಿ ಬರುವ ತೊರವಿಯ ಶಾಂತಿ ನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗಳು ವಿಶಾಲವಾದ ಜಾಗವನ್ನು ಹೊಂದಿ, ಮೂಲಭೂತ ಸೌಕರ್ಯಗಳ ಜೊತೆಗೆ ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಸದರಿ ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

