ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆ ಪರಿಶೀಲಿಸಿದ ಶಾಸಕ ಅಶೋಕ ಮನಗೂಳಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಬಳಗಾನೂರ ಕರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ರೂ.೨೦ ಕೋಟಿ ಮೊತ್ತದ ಅನುದಾನ ಮಂಜೂರಾಗಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಮತಕ್ಷೇತ್ರದ ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಭೇಟಿ ನೀಡಿ ಪರಿಶೀಲನೆ ಮಾತನಾಡಿದ ಅವರು, ಬಳಗಾನೂರ ಕೆರೆ ಪ್ರದೇಶದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ವರದಿ ನೀಡುವಂತೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಈ ವೇಳೆ ಬೆಳಗಾವಿಯ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಆನಂದಕುಮಾರ ಎಮ್. ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಚೈತ್ರಾ, ರಾಂಪೂರ ಪಿಎ ಕೆಬಿಜೆಎನ್‌ಎಲ್ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ, ಸತೀಶಬಾಬು, ವಿಜಯಪುರ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ವಿಜಯಪುರ ತೋಟಗಾರಿಕೆ ಇಲಾಖೆ ಶಾಲಿನಿ ತಳಕೇರಿ, ಆಲಮೇಲ ತಹಶೀಲ್ದಾರ್ ಎಮ್.ಎಸ್.ಅರಕೇರಿ, ಸಿಂದಗಿ ಅರಣ್ಯ ಇಲಾಖಾಧಿಕಾರಿ ರಾಜೀವ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

