ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿರುವ ಶ್ರೀ ಶರಣಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಪ್ರಜ್ವಲ್ ಅಳ್ಳಗಿ ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ
ಬೆಸ್ಟ್ ಫಿಸಿಕ್ (75 ಕೆಜಿ) ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಕೊರಳಿಗೆ ಹಾಕಿಕೊಂಡಿದ್ದಾರೆ.
ತಮ್ಮ ಸಂಸ್ಥೆಯ ಕಾಲೇಜು ವಿದ್ಯಾರ್ಥಿಯ ಸಾಧನೆಗೆ ಶ್ರೀ ಶರಣಬಸವೇಶ್ವರ ಸಂಸ್ಥೆಯ
ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರರು ಅಭಿನಂದನಿಸಿ, ರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

