ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇದರ ನಿರ್ದೇಶನದ ಮೇರೆಗೆ ಬರುವ ಜನೇವರಿ 2 ರಿಂದ 90 ದಿನಗಳ ಕಾಲ ನಡೆಯಲಿರುವ ಮಧ್ಯಸ್ಥಗಾರರ 2.0 ಅಭಿಯಾನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಎಲ್ಲ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಮಧ್ಯಸ್ಥಿಕೆ ಕೇಂದ್ರದಲ್ಲಿ ಬಗೆಹರಿಸಿಕೊಂಡು ಸಮಯ ಹಾಗೂ ಹಣ ಉಳಿತಾಯದ ಸದುಪಯೋಗ ಪಡೆದುಕೊಳ್ಳಬೇಕೆಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ನ್ಯಾಯಾಧೀಶ ಶಶಿಧರ ಎಂ.ಗೌಡ, ಸಮಿತಿಯ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಅಮೀತ ಘಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
