ಕೊಲ್ಹಾರ: ಸ್ಥಳೀಯ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ವೀರೇಶ ಹಟ್ಟಿಯವರನ್ನು ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದು, ಈಗಿದ್ದ ಸ್ಥಳದಲ್ಲೇ ಕಾರ್ಯನಿರ್ವಹಿಸಲು ಸಚಿವ ಶಿವಾನಂದ ಪಾಟೀಲರು ಗಮನ ಹರಿಸಬೇಕು ಎಂದು ಹಿರೇಮಠದ ಮುರುಘೇಂದ್ರ ಮಹಾಸ್ವಾಮಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ಗುರುವಾರಪತ್ರಿಕಾಗೋಷ್ಠಿಯ ಮೂಲಕ ಹೇಳಿಕೆ ನೀಡಿರುವ ಅವರು, ಪಟ್ಟಣದಲ್ಲಿ ಸರಕಾರದ ವಿವಿಧ ಯೋಜನೆಯ ಅಡಿಯಲ್ಲಿ ಅಭಿವೃದ್ದಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಇಂತಹ ಪ್ರಸಂಗದಲ್ಲಿ ವರ್ಗಾವಣೆ ಮಾಡುವುದರಿಂದ ಹೊಸಬರಿಗೆ ಕಾಮಗಾರಿಗಳ ಕುರಿತು ಮಾಹಿತಿ ಇರುವದಿಲ್ಲ. ಕಳೆದ ಒಂದು ವರ್ಷದಿಂದ ಕೊಲ್ಹಾರ ಪಟ್ಟಣದ ಸಮಗೃ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಮುಖ್ಯಾಧಿಕಾರಿಗಳಿಗೆ ನಾವೆಲ್ಲರೂ ಕೈಜೋಡಿಸಬೇಕು. ಇಲ್ಲದಿದ್ದರೆ ಅಭಿವೃದ್ದಿ ಕುಂಠಿತವಾಗಲು ಸಚಿವರೇ ಕಾರಣರಾದಂತಾಗುತ್ತದೆ ಎಂದರು.
ಮುಖ್ಯಾಧಿಕಾರಿ ವೀರೇಶ ಹಟ್ಟಿಯವರು ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರಿಗೆ ಮತ್ತು ಸದಸ್ಯರಿಗೆ ಬೇಡವಾಗಿರಬಹುದು, ಆದರೆ ಪಟ್ಟಣದ ಪ್ರತಿಯೊಬ್ಬ ಸಾರ್ವಜನಿಕರ ಕೆಲಸಗಳಿಗೆ ಅನುಕೂಲವಾಗುತ್ತಿರುವ ಪಟ್ಟಣ ಪಂಚಾಯತಿ ಮೂಲಕ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಮುಖ್ಯಾಧಿಕಾರಿಗಳ ಕಾರ್ಯವನ್ನು ಜನರು ಮೆಚ್ಚಿಕೊಂಡಿದ್ದಾರೆ. ಆದ್ದರಿಂದ ಈ ಭಾಗದ ಶಾಸಕರು, ಸರಕಾರದ ಸಚಿವರು ಆಗಿರುವ ಶಿವಾನಂದ ಪಾಟೀಲರು ಯಾರದೋ ಒತ್ತಡಕ್ಕೆ ಮಣಿದು ಮುಖ್ಯಾಧಿಕಾರಿಗಳನ್ನು ವರ್ಗಾಯಿಸಬಾರದು ಎಂದು ಆಗ್ರಹಿಸಿದ್ದಾರೆ.
Related Posts
Add A Comment