ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯಿರ್ವೇದ, ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಡಿಸೆಂಬರ್ 29 ರಿಂದ ಜನೇವರಿ 03ರ ವರೆಗೆ ಡಿಸ್ಮೆನೋರಿಯಾ(ಮಾಸಿಕ ಧರ್ಮದ ನೋವು ಮತ್ತು ತೊಂದರೆ) ಕುರಿತು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಇಂಥ ಸಮಸ್ಯೆಯನ್ನು ಎದುರಿಸುತ್ತಿರುವ ಸ್ತ್ರೀಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಮೊ. ನಂ. 9380093550 ಮತ್ತು 9448664406 ಸಂಪರ್ಕಿಸಬಹುದಾಗಿದೆ.
