ಬಸವನಬಾಗೇವಾಡಿ: ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ಪ್ರಾಮಾಣಿಕವಾಗಿ ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಇಓ ಡಾ.ಯುವರಾಜ ಹನಗಂಡಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿಯ ರಾಜೀವಗಾಂಧಿ ಸೇವಾ ಸಭಾಭವನದಲ್ಲಿ ೨೦೨೩-೨೪ ನೇ ಸಾಲಿನ ಸಾಮಾಜಿಕ ಪರಿಶೋಧನೆ ನಡೆಸಲು ಗ್ರಾಮ ಪಂಚಾಯಿತಿ ಸಂಪನ್ಮೂಲ ವ್ಯಕ್ತಿಗಳಿಗೆ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರವನ್ನು ಗುರುವಾರ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆಯಾ ಗ್ರಾಮ ಪಂಚಾಯಿತಿಯಲ್ಲಿ ಅ.೧೬ ರಿಂದ ಸಾಮಾಜಿಕ ಲೆಕ್ಕ ಪರಿಶೋಧನೆ ಆರಂಭವಾಗುತ್ತಿದೆ. ಇದರಲ್ಲಿ ಮಹಾತ್ಮಾಗಾಂಽಜಿ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ ನೇ ಹಣಕಾಸಿನ ಲೆಕ್ಕ ಪರಿಶೋಧನೆ ಕೈಗೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಲೆಕ್ಕ ಪರಿಶೋಧನೆ ಕುರಿತು ತರಬೇತಿ ನಡೆದಿರಲಿಲ್ಲ. ಇದೀಗ ಎರಡು ದಿನಗಳ ಕಾಲ ತರಬೇತಿ ಹಮ್ಮಿಕೊಂಡಿದ್ದು. ಸಂಪನ್ಮೂಲ ವ್ಯಕ್ತಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕೆಂದರು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ಚಿದಾನಂದ ಕೋಲಾರ, ಅವರು ಸಾಮಾಜಿಕ ಪರಿಶೋಧನೆಯ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸುನಂದ ಮಡಿವಾಳ, ಮೈತ್ರಾ ರಾಠೋಡ, ದಾನೇಶ್ವರಿ ಕಡ್ಡಿ ಇತರರು ಇದ್ದರು. ಜಗದೀಶ ಕೋಲಕಾರ ಸ್ವಾಗತಿಸಿ, ನಿರೂಪಿಸಿದರು. ತರಬೇತಿಯಲ್ಲಿ ಬಸವನಬಾಗೇವಾಡಿ, ನಿಡಗುಂದಿ, ತಾಳಿಕೋಟಿ, ಮುದ್ದೇಬಿಹಾಳ ತಾಲೂಕಿನ ಗ್ರಾಮ ಪಂಚಾಯಿತಿಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
Related Posts
Add A Comment