ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಸಂಘದ ಜಿಲ್ಲಾ ಮತ್ತು ತಾಲೂಕು ಘಟಕಗಳ ಚುನಾವಣೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರು ಹಾಗೂ ಸಂಘದ ಹಿತೈಷಿಗಳಾದ ಶರಣು ಮಸಳಿ, ಮಹೇಶ ಶೆಟಗಾರ, ರಾಜು ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಮೋಹನ್ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ದೇವೆಂದ್ರ ಹೆಳವರ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಟಿ.ಕೆ.ಮಲಗೊಂಡ ಅವರನ್ನು ಸಚಿವ ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ ಸೇರಿದಂತೆ ಸಂಘದ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಇದ್ದರು.

