ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಆಯ್.ಜೋಗೂರ ಕುವೆಂಪು ರವರ ಕುರಿತು ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ಕುವೆಂಪು ರವರ ಶ್ರೇಷ್ಠ ಸಾಹಿತ್ಯದ ಕೃತಿಗಳ ಮುಖಾಂತರ ನಮ್ಮ ನಾಡಿಗೆ ಹಲವಾರು ರಾಷ್ಟ್ರ ಮಟ್ಟದ ಗೌರವ ಸಂದಿದೆ. ಅಂತೆಯೇ ಅವರ ಪುಸ್ತಕಗಳು ಹಾಗೂ ವಿಚಾರಗಳು ವಿಶ್ವಮಟ್ಟದಲ್ಲಿ ಜನಮನ್ನಣೆ ಗಳಿಸಿವೆ ಹಾಗಾಗಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆಯುವುದರ ಮುಖೇನ ಕನ್ನಡಕ್ಕೆ ವಿಶ್ವಮಟ್ಟದಲ್ಲಿ ಸ್ಥಾನಮಾನ ಲಭಿಸಿದೆ. ಹಾಗಾಗಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ವಿಶ್ವ ಮಾನವ ದಿನಾಚರಣೆ ವನ್ನಾಗಿ ಆಚರಿಸಲಾಗುತ್ತಿದೆ
ಈ ವೇಳೆ ಕುವೆಂಪು ರವರ ಕುರಿತು ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಮಕ್ಕಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ, ಮುಖ್ಯ ಗುರು ಲಕ್ಷ್ಮೀಪುತ್ರ.ಎಸ್.ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ,ಸುನೀತಾ ಗುಂಡದ, ವೀಣಾ ರಾಂಪೂರಮಠ, ರಕ್ಷಿತಾ ಹಡಪದ ಮುಂತಾದವರು ಉಪಸ್ಥಿತರಿದ್ದರು

