ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೃಷಿ ವಿಶ್ವವಿದ್ಯಾಲಯ ಧಾರವಾಡ-ವಿಜಯಪುರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ ೦೪ ರಿಂದ ೦೬ರವರೆಗೆ ವಿಜಯಪುರದ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.
ಜ.೪ರಂದು ಬೆಳಿಗ್ಗೆ ೧೧ಕ್ಕೆ ಉದ್ಘಾಟನೆಯನ್ನು ಕೃಷಿ ಸಚಿವರಾದ ಹಾಗೂ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳೂ ಆದ ಎನ್.ಚಲುವರಾಯಸ್ವಾಮಿ ಅವರು ನೆರವೇರಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದು, ಶಾಸಕರಾದ ವಿಠ್ಠಲ ಕಟಕಧೋಂಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ. ಹುಕ್ಕೇರಿ,ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
