ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಿನಾಂಕ:೦೧-೦೧-೨೦೨೪ ರಿಂದ ೩೧-೧೨-೨೦೨೫ರವರೆಗೆ ನಡೆದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಸೇನಾ ಸಿಬ್ಬಂದಿ ಹಾಗೂ ಮಾಜಿ ಸೈನಿಕರ ಅವಲಂಬಿತ ಮಕ್ಕಳಿಂದ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅಗತ್ಯ ದಾಖಲಾತಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
