ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಮಾರ್ಸನಳ್ಳಿ ಗ್ರಾಮದಲ್ಲಿರುವ ಮೆ.ಕರ್ನಾಟಕ ಕಾಟನ್ ಸೀಡ್ಸ್ ಪ್ರೈ.ಲಿ. ನಲ್ಲಿ ಸಿಸಿಆಯ್ ಇವರು ೨೦೨೫-೨೬ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು, ಇಂಡಿ ಹಾಗೂ ಚಡಚಣ ತಾಲೂಕಿನ ರೈತರು ಈ ಹತ್ತಿ ಖರೀದಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಇಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆ ತಿಳಿಸಿದೆ.
