ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜ.೦೧ರ ಬೆಳೆಗ್ಗೆ ೧೦ ಗಂಟೆಗೆ ವಿಜಯಪುರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಉದ್ಘಾಟನೆಯನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ನೆರವೇರಿಸಲಿದ್ದು,ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.ನಗರ ಶಾಸಕ ಬಸವನಗೌಡ ಆರ್. ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ,ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಜಿ.ಎಸ್.ಕವಲಗಿ, ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಫ್ ಹಾಗೂ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಡಾ.ಡಿ.ಎನ್.ಧರಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶ್ರೀಮತಿ ಭಾಗೀರಥಿ ಮೇತ್ರಿ ಅವರು ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
