ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಂಕ್ರಮಣದಲ್ಲಿ ನಡೆಯುವ ಶ್ರೀ ಸಿದ್ದೇಶ್ವರ ಜಾತ್ರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.೧೦ ರಿಂದ ೧೭ರವರೆಗೆ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆ ನಡೆಯಲಿದೆ.
ರೈತರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರಗಳನ್ನು ಜನವರಿ ೯ರಿಂದ ತೊರವಿಯ ಜಾನುವಾರು ಜಾತ್ರಾ ಸ್ಥಳಕ್ಕೆ ತರುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
