ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಲೋಣಿ (ಬಿ.ಕೆ) ಅಧ್ಯಕ್ಷ ಬಿ.ಎಂ.ಕೋರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ಉದಯರಶ್ಮಿ ದಿನಪತ್ರಿಕೆ
ಚಡಚಣ:
ಶಿಕ್ಷಣವೇ ಸಮಾಜ ಪರಿವರ್ತನೆಯ ಮೂಲಶಕ್ತಿ ಎಂಬ ತತ್ವದ ತಳಹದಿಯ ಮೇಲೆ ಗ್ರಾಮೀಣ ಪ್ರದೇಶದಲ್ಲಿ ಆರಂಭಿಸಲಾದ ಲೋಣ (ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಈ ನಿಮಿತ್ಯ ಜ.3 ಮತ್ತು 4 ರಂದು ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಕೋರೆ ಹೇಳಿದರು.
ಲೋಣಿ ಬಿ.ಕೆ ಗ್ರಾಮದ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಹಾಗೂ ಗಡಿಭಾಗದ ಮಕ್ಕಳಿಗೆ ಶಿಕ್ಷಣ ಒದಗಿಸುವ ಸಂಕಲ್ಪದೊಂದಿಗೆ 1974 ರಲ್ಲಿ ಆರಂಭಿಸಲಾದ ಈ ಸಂಸ್ಥೆ ಇಂದು ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಕಾಲೇಜು, ವೃತ್ತಿಪರ ಶಿಕ್ಷಣ ಒಳಗೊಂಡಂತೆ 11 ಅಂಗ ಸಂಸ್ಥೆಗಳಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ
ಜ.3 ರಂದು ಸುವರ್ಣ ಮಹೋತ್ಸವದ ಸಾನಿಧ್ಯವನ್ನು ವಿಜಯಪೂರ ಷಣ್ಮೂಖಾರೂಢ ಮಠದ ಅಭಿನವ ಸಿದ್ಧಾರೂಢ ಸಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೆರವೇರಿಸವರು. ಸುವರ್ಣ ಸಂಭ್ರಮದ ಪುಸ್ತಕ ಬಿಡುಗಡೆಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರೆಪ್ಪ ನೆರವೇರಿಸಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ವಿಠ್ಠಲ ಕಟಕದೊಂಡ, ಯಶವಂತರಾಯಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಸೇರಿದಂತೆ ಮಾಜಿ ಶಾಸಕರು, ಮುಖಂಡರು ಉಪಸ್ಥಿತರಿರುವರು.
ಜ.4 ರಂದು ವಿಜ್ಞಾನ ಭವನದ ಶಂಕುಸ್ಥಾಪನೆ ಹಾಗೂ ಶೈಕ್ಷಣಿಕ ಸಮಾವೇಶದ ಉದ್ಘಾಟನೆಯನ್ನುಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಸಾನಿಧ್ಯವನ್ನು ಆಳೂರು ಸಿದ್ಧಾರೂಡ ಮಠದ ಶಂಕರಾನಂದ ಸ್ವಾಮೀಜಿ ವಹಿಸಲಿದ್ದು, ಅತಿಥಿಗಳಾಗಿ ಶಾಸಕ ವಿಠ್ಠಲ ಕಟಕಧೊಂಡ, ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಕುಲಪತಿ ವಿಜಯಾ ಕೋರಿಶೆಟ್ಟಿ, ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ವಿ.ಸಿ.ನಾಗಠಾಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಶರಣ ಪರಿಷತ್ ಜಿಲ್ಲಾ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ, ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಎಂ.ಎಸ್.ಮದಭಾವಿ, ಸಂಯೋಜಕ ವಿ.ಡಿ.ಐಹೊಳ್ಳಿ ಉಪಸ್ಥಿತರಿರುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾಂತೇಶ ಸ್ವಾಮೀಜಿ, ಬಿ.ಎಸ್.ಹಿಪ್ಪರಗಿ,ವೈ.ಜಿ.ಗುಡ್ಡದ, ಜೆ.ಎಸ್.ಕಾಪಸೆ, ಸಾಹೇಬಗೌಡ ಬಿರಾದಾರ, ಬಾಪುರಾಯ ಲೋಣಿ, ಎಸ್.ಎಸ್.ಕೋಳಿ, ಜಿ.ಬಿ.ಕೋರಿ ಇದ್ದರು

