ಕೊಲ್ಹಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಶ್ರದ್ಧಾಂಜಲಿ ಸಭೆ
ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಹಿಂದೂಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹತ್ಯೆ ಹಾಗೂ ದೌರ್ಜನ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಂಜಲಿ ಹಾಗೂ ಪಂಜಿನ ಮೆರವಣಿಗೆ ನಡೆಯಿತು.
ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಿಂದ ಆರಂಭವಾದ ಈ ಮೆರವಣಿಗೆ ಪ್ರಮುಖ ಬೀದಿಗಳ ಮೂಲಕ ಸಾಗಿ ಮರಳಿ ದೇವಸ್ಥಾನದ ತಲುಪಿತು. ನೂರಾರು ಹಿಂದೂ ಕಾರ್ಯಕರ್ತರು ಪಂಜುಗಳನ್ನು ಹಿಡಿದು ಮೌನ ಶ್ರದ್ಧಾಂಜಲಿ ಸಲ್ಲಿಸಿ, ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲೆ ನಡೆಯುತ್ತಿರುವ ಅಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಂಕರ ಗಣಾಚಾರಿ, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಬೆಳ್ಳುಬ್ಬಿ, ಬಜರಂಗದಳ ಅಧ್ಯಕ್ಷ ಮಹೇಶ್ ತುಂಬುರಮಟ್ಟಿ ಸೇರಿದಂತೆ ಅನೇಕ ಹಿಂದೂ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

