ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪುಸ್ತಕಗಳ ಆಯ್ಕೆ ಲೇಖಕ, ಲೇಖಕ-ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ಹಾಗೂ ಸ್ಪರ್ಧಾತ್ಮಕ, ಪಠ್ಯ, ಪರಾಮರ್ಶನ, ಸಾಂದರ್ಭಿಕ ಮತ್ತು ಅಭಿನಂದನ ಗ್ರಂಥಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಬಹುದು.
೨೦೨೫ರ ಕರ್ನಾಟಕದಲ್ಲಿ ಪ್ರಥಮವಾಗಿ ಮುದ್ರಣಗೊಂಡ ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ಉಪನಿರ್ದೇಶಕರ ಕಚೇರಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ದಿನಾಂಕ ೩೧-೦೧-೨೦೨೬ರ ಸಂಜೆ ೫:೩೦ರ ಒಳಗಾಗಿ ನೋಂದಣಿ ಮಾಡಿಸುವುದು ಹಾಗೂ ಈ ಪುಸ್ತಕಗಳನ್ನು ಮಾತ್ರ ರಾಜ್ಯ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗೆ ಪರಿಗಣಿಸಲಾಗುವುದು.
ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದು ಹಾಗೂ ಪುಸ್ತಕದ ಒಂದು ಪ್ರತಿಯನ್ನು ದಿನಾಂಕ:೩೧-೦೧-೨೦೨೬ರ ೫:೩೦ರೊಳಗೆ ಆಯ್ಕೆಗಾಗಿ ಉಪನಿರ್ದೇಶಕರು, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಬೆಂಗಳೂರು ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: ೮೩೫೨-೨೫೦೬೪೪ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
