ಉದಯರಶ್ಮಿ ದಿನಪತ್ರಿಕೆ
ಇಂಡಿ: ಸಮಾಜದಲ್ಲಿ ಎದುರಾದ ಅನೇಕ ಅವಮಾನ-
ಕಷ್ಟಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರದ ಬೀಜ ಬಿತ್ತಿದ ಶಿಕ್ಷಣದ ಸಾಧಕಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಹಾಗೂ ಪಾಲಕ-ಶಿಕ್ಷಕರ ಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ, ಸತಿ ಪದ್ಧತಿ ಮತ್ತು ಜಾತಿ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಸರಳ ಜೀವನಶೈಲಿಯೊಂದಿಗೆ, ಭಾರತೀಯ ಮಹಿಳಾ ಸಬಲೀಕರಣದ ಸಂಕೇತವಾಗಿ ಇಂದಿಗೂ ಸ್ಫೂರ್ತಿಯಾಗಿ ನಿಂತಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಅಲ್ಲಾಭಕ್ಷ ಮಕಾನದಾರ ಮಾತನಾಡಿ, ಮಕ್ಕಳು ಮನೆಗೆ ಬಂದ ನಂತರ ಪಾಠ ಹೇಳಿಕೊಡುತ್ತಾ, ಮನೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸುವುದು ತಂದೆ-ತಾಯಿಯರ ಕರ್ತವ್ಯ. ಜೀವನ ಮೌಲ್ಯಗಳನ್ನು ಮನೆಯಿಂದಲೇ ರೂಢಿಸಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಮಾತನಾಡಿ,
ಪಾಲಕರ ಸಹಭಾಗಿತ್ವವು ಮಕ್ಕಳ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಗೆ ನಿರ್ಣಾಯಕವಾಗಿದೆ ಎಂದು ಹೇಳಿದರು.
ಹಿರಿಯ ಶಿಕ್ಷಕ ಎಸ್ ಎಸ್ ಅರಬ ಶಾಲೆಯ ಸೌಲಭ್ಯಗಳ ಕುರಿತು ಪಾಲಕರೊಂದಿಗೆ ಚರ್ಚಿಸಿದರು. ಪಾಲಕರಾದ
ಭಾಷಾಸಾಬ ಅಂಗಡಿ, ಅಬ್ದುಲ್ ಜಬ್ಬಾರ್ ಬಾಗವಾನ, ಮುಜೀಬ್ ಬಾಗವಾನ, ಮಹ್ಮದ್ ಹನೀಫ್ ಕಸಾಬ, ಯಾಸೀನ್ ಜಾತಗಾರ, ಜಾವೇದ್ ಬಾಗವಾನ, ಆಶಾಬಿ ನದಾಫ್, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಹಾಗೂ ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

