ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, 2022-23ನೇ ಸಾಲಿನಲ್ಲಿ ಮುಜರಾಯಿ ಇಲಾಖೆಯಿಂದ ನಗರ ಮತಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ.26ರ ದಿವಟಗೇರಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರಿಸಿದ ರೂ.10 ಲಕ್ಷ ಅನುದಾನದ ಪೈಕಿ ಮೊದಲ ಕಂತಿನಲ್ಲಿ ರೂ.5 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
