ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಹೆಸ್ಕಾಂ ವಿಭಾಗೀಯ ಕಚೇರಿ ಆವರಣದಲ್ಲಿ ಹೆಸ್ಕಾಂ ಹಾಗೂ ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತ ನೌಕರರ ಸಂಘದ ಸಹಯೋಗದಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಲಿಂ.ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರು ನಮನದಂಗವಾಗಿ ಶುಕ್ರವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರಕ್ತದಾನ ಶಿಬಿರದಲ್ಲಿ 65 ನೌಕರ ಬಾಂಧವರು ರಕ್ತದಾನ ಮಾಡಿದರು.
ನೌಕರರ ಬಾಂಧವರ ರಕ್ತದೊತ್ತಡ, ರಕ್ತದಲ್ಲಿನ ಹಿಮೋಗ್ಲೋಬಿನ್ ಪರೀಕ್ಷೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿದ್ರಾಮ ಬಿರಾದಾರ, ಸ್ಥಳೀಯ ಹೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ವ್ಹಿ.ಶಹಾ, ತಾಳಿಕೋಟಿ ಹೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಬಿರಾದಾರ, ನೌಕರ ಬಾಂಧವರಾದ ಎಂ.ವೈ.ಉಕ್ಕಲಿ, ಮಲ್ಲು ಗೇಡಿ, ಸುಭಾಸ ನಾಶಿ, ಗುರು ಯರನಾಳ, ಮಂಜು ಈಳಗೇರ, ಶಿವಾನಂದ ಕುಳಗೇರಿ, ರಮೇಶ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು

