ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಆಗ್ರಹ
ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಇದು.
ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ ಮಾಡಬಾರದು, ಮಾಡಿದರೆ ಈ ಸರ್ಕಾರ ಅವರನ್ನು ಟಾರ್ಗೆಟ್ ಮಾಡಿ ಅವರ ಮೇಲೆ FIR ದಾಖಲಿಸಿ, ಬಂಧಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಈ ಕಾಂಗ್ರೇಸ್ ಸರಕಾರ ಬಂದಾಗಿನಿಂದ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಬಗ್ಗೆ ಕೂಡಲೇ ಸರಕಾರ ಸ್ಪಂದಿಸಬೇಕು. ಪ್ರತಿಭಟನಾ ನಿರತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ಮೇಲಿನ ಪ್ರಕರಣವನ್ನು ರದ್ದು ಗೊಳಿಸಬೇಕೆಂದು ನಾನು ಸರ್ಕಾರವನ್ನು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

