ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ( ೦೮೩೫೫೨_೨೯೫೫೨೩) ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ, ವಿಜಯಪುರ ( ೮೧೨೩೭೧೦೭೬೬) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಬ. ಬಾಗೇವಾಡಿ ( ೯೯೭೨೩೪೦೭೨೧) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮುದ್ದೇಬಿಹಾಳ (೮೭೨೨೪೪೫೫೫೨) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ( ೯೦೩೫೫೫೮೬೦೯) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
