ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಲಮೇಲ ಶಾಲೆಯಲ್ಲಿ ಅಕ್ಷರದ ಅವ್ವ, ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜೋಗೂರ ರವರು ೧೮ನೇ ಶತಮಾನದಲ್ಲಿ ಅಸ್ಪೃಶ್ಯತೆ ಯನ್ನು ಹೋಗಲಾಡಿಸಿ , ಜ್ಞಾನದ ಹಣತೆಯನ್ನು ಹಚ್ಚಲು ಪೌರೋಹಿತ್ಯ ಸಮಾಜದಿಂದ ಅನೇಕ ಅವಮಾನಗಳನ್ನು ಸಹಿಸಿಕೊಂಡು ಪ್ರತಿಯೊಂದು ಹೆಣ್ಣು ಅಕ್ಷರ ಜ್ಞಾನ ಪಡೆಯಲು ತಮ್ಮ ಇಡೀ ಜೀವನವನ್ನು ಶೈಕ್ಷಣಿಕ ಕ್ರಾಂತಿಗೆ ಮುಡುಪಾಗಿಟ್ಟ ಸಾವಿತ್ರಿಬಾಯಿ ಫುಲೆ ರವರ ಆದರ್ಶಗಳು ಇಂದಿನ ಮಕ್ಕಳಿಗೂ ದಾರಿ ದೀಪ ಎಂದರು.
ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಸಾವಿತ್ರಿ ಬಾಯಿ ಫುಲೆ ರವರ ವಿಚಾರ ಸಂಕಿರಣ ಆಯೋಜಿಸಿ ಮಕ್ಕಳಿಗೆ ಬಹುಮಾನ ವಿತರಿಸಿರುವುದು ಶ್ಲಾಘನೀಯ ಕಾರ್ಯ ಎಂದು ಸಾಹಿತ್ಯ ಚಟುವಟಿಕೆಗೆ ಅಭಿನಂದನೆ ತಿಳಿಸಿದರು.
ಈ ವೇಳೆ ಸಾವಿತ್ರಿಬಾಯಿ ಫುಲೆ ರವರ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಸಂಗಮದ ವತಿಯಿಂದ ಪುಸ್ತಕಗಳನ್ನು ಬಹುಮಾನ ರೂಪವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಾಹಿತ್ಯ ಸಂಗಮದ ತಾಲ್ಲೂಕು ಅಧ್ಯಕ್ಷರು ಲಕ್ಷ್ಮೀಪುತ್ರ ಕಿರನಳ್ಳಿ, ಹಾಗೂ ಸಂಘಟನಾ ಕಾರ್ಯದರ್ಶಿ ಅಪ್ಪು ಶೆಟ್ಟಿ ಮಾತನಾಡಿದರು.ಈವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ , ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ವೀಣಾ ರಾಂಪೂರಮಠ, ಸುನೀತಾ ಗುಂಡದ,ರಕ್ಷಿತಾ ಹಡಪದ ಮುಂತಾದವರು ಇದ್ದರು

