Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ :ಡಿಸಿಎಂ
(ರಾಜ್ಯ ) ಜಿಲ್ಲೆ

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ :ಡಿಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಕ್ಕೆ ನಿಂತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಕ್ಕೆ ನಿಂತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ʻರಿಪಬ್ಲಿಕ್ ಆಫ್ ಬಳ್ಳಾರಿʼಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಕಾರಣವಾದ ಬಳ್ಳಾರಿ ಫೈರಿಂಗ್ ಘಟನೆಯ ನಂತರ ಖಾಸಗಿ ಬಂದೂಕುಗಳನ್ನು ಹೊಂದಲು ಅನುಮತಿ ನೀಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, “ಯಾರ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಲಿದೆ” ಎಂದು ಹೇಳಿದರು.
ನಮ್ಮ ಸರ್ಕಾರ ಮೊದಲ ಬಾರಿಗೆ ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
“ಕೆಲವೊಮ್ಮೆ, ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ನನ್ನ ಮನೆಯ ಮುಂದೆಯೂ ಪೋಸ್ಟರ್‌ಗಳನ್ನು ಹಾಕುತ್ತಾರೆ. ‘ಅದನ್ನು ಮಾಡಬೇಡಿ’ ಎಂದು ನಾನು ಹೇಳಬಹುದೇ? ಬಿಜೆಪಿಯವರು ಸಿಎಂ ನಿವಾಸದ ಮುಂದೆಯೂ ಪೋಸ್ಟರ್ ಹಾಕುತ್ತಾರೆ” ಎಂದು ಅವರು ಹೇಳಿದರು.
ಪೋಸ್ಟರ್ ಹಾಕಿದರೆ “ಏನು ಸಮಸ್ಯೆ? ನಿಮಗೆ(ಜನಾರ್ದನ ರೆಡ್ಡಿ) ಏನು ತೊಂದರೆಯಾಯಿತು? ವಾಲ್ಮೀಕಿ ಪ್ರತಿಮೆ ಉದ್ಘಾಟನೆಗಾಗಿ ನಾವು ಕಾರ್ಯಕ್ರಮ ಆಯೋಜಿಸುತ್ತಿದ್ದೆವು ಎಂದರು.
ನಮ್ಮ ಕಾರ್ಯಕರ್ತನನ್ನು ಕೊಲೆ ಮಾಡಲಾಗಿದೆ ಮತ್ತು ಅದಕ್ಕೆ ಬಿಜೆಪಿಯೇ ಕಾರಣ” ಎಂದು ಡಿಕೆ ಶಿವಕುಮಾರ್ ಆರೋಪಿಸಿದರು.
ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. “ಪೊಲೀಸ್ ತನಿಖೆ ನಡೆಯುತ್ತಿರುವಾಗ ನಾನು ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದರು.

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ.”

– ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026
    In ದಿನಪತ್ರಿಕೆ
  • ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
    In (ರಾಜ್ಯ ) ಜಿಲ್ಲೆ
  • ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶುದ್ಧ ಕುಡಿವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಿರಲಿ
    In (ರಾಜ್ಯ ) ಜಿಲ್ಲೆ
  • ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರ ಕುಂದುಕೊರತೆ ಸಭೆ ಜೂ.೨೪ ಕ್ಕೆ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ಒತ್ತಡದ ಬದುಕಿಗೆ ಯೋಗ ಅವಶ್ಯಕ :ಶೇಗುಣಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.