ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಾಕ್ಷಿ ವಾಲಿಕಾರ ಇವಳು ಕರ್ನಾಟಕ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗುವ ಮೂಲಕ ರಾಷ್ಟç ಮಟ್ಟದ ಬಾಸ್ಕೆಟ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾಳೆ. ಈ ಮೂಲಕ ಸಂಸ್ಥೆಯ, ಜಿಲ್ಲೆಯ ಹಾಗೂ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ಇದೇ ಡಿ.೨೯ ರಿಂದ ಜ.೦೯ ರವರೆಗೆ ರಾಜಸ್ಥಾನದಲ್ಲಿ ನಡೆಯುವ ರಾಷ್ಟç ಮಟ್ಟದ ೧೯ ವರ್ಷ ವಯೋಮಿತಿಯ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿಲಿದ್ದಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯವರು, ಆಡಳಿತಾಧಿಕಾರಿಗಳು, ಪ್ರಾಚಾರ್ಯರು, ದೈಹಿಕ ನಿರ್ದೇಶಕರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

