ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜ.೬ರ ಬೆಳಿಗ್ಗೆ ೯ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತ್ರಾಯ ರಂಗಮಂದಿರದರೆಗೆ ರಸ್ತೆ ಸುರಕ್ಷತಾ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಂತರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಆಗಮಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸಿಂ ಬಾಬಾ ಮುದ್ದೇಬಿಹಾಳ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
