ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ವಿಜಯಪುರ ಸರ್ಕಾರಿ ವೈದ್ಯಕೀಯ ಹೋರಾಟ ಸಮಿತಿಯ ಹೋರಾಟಗಾರರ ಬಂಧನ ಖಂಡಿಸಿ ಹಾಗೂ ಬಿಡುಗಡೆಗೊಳಿಸಲು ಆಗ್ರಹಿಸಿ ಪಟ್ಟಣದ ಜನವೇದಿಕೆ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ಆಗಮಿಸಿದ ಜನವೇದಿಕೆ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರ ಬಂಧನದ ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕಾಧ್ಯಕ್ಷ ರಹಿಮಾನ್ ಕಣಕಾಲ ಮಾತನಾಡಿ, ಪಿಪಿಪಿ ಮಾದರಿ ಖಾಸಗಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಅದರ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಅನಿರ್ಧಿಷ್ಟ ಮತ್ತು ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡ ೨೭ ಜನ ಹೋರಾಟಗಾರರ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಹಾಗೂ ಅವರ ಮೇಲಿನ ಪ್ರಕರಣಗಳನ್ನು ಕೂಡಲೇ ಹಿಂತೆಗೆದುಕೊಳ್ಳಲು ಆಗ್ರಹಿಸಿದರು.
ನಂತರ ತಹಶೀಲ್ದಾರರಿಗೆ ಮನವಿ ನೀಡಿದರು.
ರಾಷ್ಟ್ರೀಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ, ಶಾಂತಾ ದೇಗಿನಾಳ, ಜೈನಾಬಿ ಮೋಮಿನ, ಹಸನ್ ನಧಾಫ್, ಹಸನಸಾಬ್ ಬಾಗವಾನ, ದೀಲೀಪ ದೊಡಮನಿ, ಬಸವರಾಜ ಅತನೂರ, ಜಂಬಣ್ಣ ದುರ್ಗಮುರ್ಗಿ ಇದ್ದರು.

