ಸಿಂದಗಿ: ಪುರುಷರಿಗೆ ಮತ್ತು ಮಹಿಳೆಯರಿಗೆ ೩ ತಿಂಗಳಿಗೊಮ್ಮೆ ಬಿಪಿ ಮತ್ತು ಶುಗರ್ ತಪಾಸಣೆ ಮಾಡಬೇಕು. ಇತ್ತಿಚಿನ ದಿನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯದ ಸಮಸ್ಯೆಗಳಾಗುತ್ತಿವೆ. ಕಾರಣ ದೇಹಕ್ಕೆ ಸಾಕಷ್ಟು ವ್ಯಾಯಾಮ ಸಿಗದೇ ಇರುವುದೇ ಕಾರಣ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಕುಲಕರ್ಣಿ ಹೇಳಿದರು.
ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಮಾಜಿ ದೇವದಾಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಮಾನಗಳಲ್ಲಿ ಸಣ್ಣ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು ಬಹಳ ಆಗುತ್ತಿದೆ. ಆದ್ದರಿಂದ ಮನೆಯಲ್ಲಿ ತಯ್ಯಾರಿ ಮಾಡಿದ ಆಹಾರವನ್ನು ಮಕ್ಕಳಿಗೆ ಕೊಡಬೇಕು. ಸ್ತನ ಕ್ಯಾನ್ಸರ್ ಮತ್ತು ಗರ್ಭಕ್ಯಾನ್ಸರ್ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಿದರು. ಮಕ್ಕಳಿಗೆ ಕೊಡುವ ಚುಚ್ಚುಮದ್ದನ್ನು ಸರಿಯಾದ ಸಮಯಕ್ಕೆ ಕೊಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಸಂಸ್ಥೆಯ ಸಹನಿರ್ದೇಶಕ ಸಿಂತಿಯಾ ಡಿ,ಮೆಲ್ಲೊರ, ಹಣಮಂತ ಕಲಾಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬೌರವ್ವ ನಾಯ್ಕೋಡಿ, ಇಂದ್ರಾಬಾಯಿ ಮಾದರ್, ತೇಜಸ್ವಿನಿ ಹಳ್ಳದಕೆರಿ, ಬಸವರಾಜ್ ಬಿಸನಾಳ್, ಬಸಮ್ಮ ಅಲ್ಲಾಪುರ ಸೇರಿದಂತೆ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಮತ್ತು ದೇವದಾಸಿಯರು ಇದ್ದರು.
Related Posts
Add A Comment