ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಹಾಗೂ ಹಾಪ್‌ಕಾಮ್ಸ್ ಇವರ ಸಹಯೋಗದಲ್ಲಿ ಜನವರಿ ೧೩ ರಿಂದ ೧೫ರ ವರೆಗೆ ಮೂರು ದಿನಗಳ ಕಾಲ ನಗರದ ತೋಟಗಾರಿಕೆಯ ಜಂಟಿ ನಿರ್ದೇಶಕರ ಕಛೇರಿ, ಬಸವ ವನ, ಅವರಣದಲ್ಲಿ ಫಲ-ಪುಷ್ಪ ಪ್ರದರ್ಶನ-ಹಣ್ಣುಗಳ ಮೇಳ ಹಾಗೂ ತೋಟಗಾರಿಕೆ ಅಭಿಯಾನ ಕಾರ್ಯಕ್ರಮ ಏರ್ಪಡಿಲಾಗಿದೆ.
ಮೇಳದಲ್ಲಿ ರೈತರು ಬೆಳೆದಿರುವ ವಿವಿಧ ಹಾಗೂ ಅತ್ಯುತ್ತಮ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಇಲಾಖಾ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ, ಹಣ್ಣುಹೂ ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ, ತೋಟಗಾರಿಕೆಯಲ್ಲಿ ಯಾಂತ್ರೀಕರಣ,ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಲಿಂಬೆ ಕುರಿತ ಒಂದು ದಿನದ ವಿಚಾರ ಸಂಕೀರ್ಣ ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ರೈತರು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
