ಸಿಂದಗಿ: ಪ್ರತಿಭೋತ್ಸವ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಸಾಧ್ಯ ಎಂದು ಅಂಜುಮನ್ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಜಿಲಾನಿ ನದಾಫ್ ಹೇಳಿದರು.
ಪಟ್ಟಣದ ಹೊರವಲಯದ ಕಲಬುರಗಿ ರಸ್ತೆಯಲ್ಲಿರುವ ಲೊಯೋಲ ಶಾಲೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೊಯೋಲ ಶಾಲೆಯು ಇಂತಹ ಕಾರ್ಯಕ್ರಮದ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸುವಲ್ಲಿ ಯಶಸ್ವಿಯಾಗಿದೆ. ಪ್ರತಿಭೋತ್ಸವದಲ್ಲಿ ಪ್ರಾಥಮಿಕ ವಿಭಾಗದ ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಿ ಬಹುಮಾನವನ್ನು ಗಿಟ್ಟಿಸಿಕೊಂಡಿದ್ದು ಸಂತಸ ತಂದಿದೆ ಎಂದರು.
ಇದೇ ಸಂದರ್ಭದಲ್ಲಿ ಸಿದ್ದು ಕರಿಗೊಂಡ, ಲೊಯೋಲ ಶಾಲೆಯು ಇಂತಹ ವೇದಿಕೆಗಳನ್ನು ಒದಗಿಸಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ವ್ಯಕ್ತಪಡಿಸಲು ಅನುಕೂಲ ಮಾಡಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಫಾದರ್ ಜೀವನ್ ಡಿಸೋಜಾ, ಪ್ರಾಚಾರ್ಯ ಫಾದರ್ ಲ್ಯಾನ್ಸಿ ಫರ್ನಾಂಡಿಸ್, ಸಿಸ್ಟರ್ ಸೋಫಿಯಾ, ರೇಷ್ಮಾ, ವಿದ್ಯಾ, ಸಿದ್ದಪ್ಪ ಎಂ, ಮಂಜುಳಾ, ಪುಷ್ಪಾ, ಲಕ್ಷ್ಮಿ, ಅನಿತಾ, ಸೀಮಾ, ಶಿಲ್ಪಾ ನಿರ್ಣಯಕರಾಗಿ ಕಾರ್ಯ ನಿರ್ವಹಿಸಿದರು.
Related Posts
Add A Comment