ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜ.೧೧ ರಂದು ಜಿಲ್ಲೆಯ ೧೬ ಪರೀಕ್ಷಾ ಕೆಂದ್ರಗಳಲ್ಲಿ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ೧೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಪ್ರಥಮಾವಧಿಯಲ್ಲಿ ೬,೬೦೮ ಅಭ್ಯರ್ಥಿಗಳು,ದ್ವೀತಿಯ ಅವಧಿಯಲ್ಲಿ ೬,೫೫೮ ಅಭ್ಯರ್ಥಿ ಪರೀಕ್ಷೆ ಬರೆಯಲಿದ್ದು, ಯಾವುದೇ ತೊಂದರೆಯಾಗದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೆಕು ಎಂದು ಸೂಚನೆ ನೀಡಿದರು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ೧೬ ವೀಕಕ್ಷರನ್ನು ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಉಪ ಮುಖ್ಯ ಅಧಿಕ್ಷಕರು, ಪ್ರಶ್ನೆಪತ್ರಿಕೆ ಪಾಲಕರನ್ನು ಹಾಗೂ ಜಾಗ್ರತಾದಳ ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷೆಗಳಲ್ಲಿ ಯಾವುದೇ ಗೊಂದಲ ಮಾಡಿಕೊಳ್ಳದೇ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸಲು ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ಹಣಮಂತಪ್ಪ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಹೊಸಮನಿ, ಪರೀಕಾ ಕೇಂದ್ರಗಳ ಉಪ ಮುಖ್ಯ ಅಧಿಕ್ಷಕರು, ವಿಕ್ಷಕರು ಹಾಗೂ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

