ಉದಯರಶ್ಮಿ ದಿನಪತ್ರಿಕೆ
ಇಂಡಿ: ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಂಡಿದ್ದು, ಇನ್ನೂ ಹೆಚ್ಚಿನ ಫಲಾನುಭವಿಗಳಿಗೆ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಬೇಕೆಂದು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸೂಚನೆ ನೀಡಿದರು. ಅವರು ಗುರುವಾರ ಇಂಡಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾ ಭವನದಲ್ಲಿ ಏರ್ಪಡಿಸಿದ್ದ ಪಂಚ್ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿದ್ದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ಮಾತನಾಡಿ, ಗೃಹಲಕ್ಷ್ಮೀ, ಗ್ರಹ ಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಹಾಗೂ ಅನ್ನ ಭಾಗ್ಯ ಯೋಜನೆಗಳ ಪ್ರಗತಿಯ ಮಾಹಿತಿಯನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಾದ ಮಹೇಶ ಹೊನ್ನಬಿಂದಗಿ, ಸಂಜೀವಕುಮಾರ ನಾಯ್ಕೊಡಿ, ಸತೀಶ ಹತ್ತಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ ಮಠ, ಸಿದ್ದು ಕಟ್ಟೀಮನಿ, ಪ್ರಭು ಕುಂಬಾರ, ಸಂಕೇತ ಜ್ಯೋಶಿ, ಮಲ್ಲೇಶ ಬೋಸಗಿ, ರುದ್ರುಗೌಡ ಅಳಗೊಂಡ, ಭೀಮರಾಯ ಮೇತ್ರಿ, ಸೋಮಣ್ಣ ಪ್ರಚಂಡಿ, ಅಜೀತ ಜೀರಗಿ, ತಾಲ್ಲೂಕು ಪಂಚಾಯತಿ ಅಧಿಕಾರಿ ನಂದೀಪ ರಾಠೋಡ ಇದ್ದರು.

