ಮುದ್ದೇಬಿಹಾಳ: ಚಾಲಕ ನಿಯಂತ್ರಣ ತಪ್ಪಿ ನಾಲ್ಕು ಚಕ್ರದ ಆಟೋ (ಟಾಟಾಏಸ್) ಪಲ್ಟಿಯಾಗಿ ನಾಲ್ವರ ಗಂಭೀರವಾಗಿ ಮತ್ತು ಸುಮಾರು ೧೨ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಜಂಗಮುರಾಳ ಗ್ರಾಮದ ಬಳಿ ನಡೆದಿದೆ.
ಗಾಯಾಳುಗಳೆಲ್ಲರೂ ಹೊಲಗಳಲ್ಲಿ ಕೆಲಸ ಮಾಡಲು ಟಾಟಾಏಸ್ ನಲ್ಲಿ ಪ್ರಯಾಣಿಸುತ್ತಿದ್ದು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು ನಾಲ್ಕು ಜನ ಗಂಭೀರ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ದೌಡಾಯಿಸಿದ ಕುಂಟೋಜಿಯ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಯುವ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ ರಫೀಕ ಶಿರೋಳ ಗಾಯಾಳುಗಳ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.
Subscribe to Updates
Get the latest creative news from FooBar about art, design and business.
ಟಾಟಾಏಸ್ ಪಲ್ಟಿ: ೧೨ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು
Related Posts
Add A Comment

