ಮುದ್ದೇಬಿಹಾಳ: ಡೆಂಗ್ಯೂ ತಡೆಗೆ ವ್ಯಾಪಕವಾಗಿ ಮಾಹಿತಿ ನೀಡುವ ಅಗತ್ಯವಿದೆ. ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ ಹೇಳಿದರು.
ಪಟ್ಟಣದ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಎದುರು ಡೆಂಗ್ಯು ಜಾಗೃತಿ ರಥ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಡಂಗ್ಯೂ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ದಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ. ಈ ಸೊಳ್ಳೆ ಕಚ್ಚಿದ ನಂತರ ಜ್ವರ, ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವುಕಾಣಿಸುವದು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಮತ್ತು ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುವದು ಹೀಗೆ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇಂತಹ ಯಾವುದೇ ಲಕ್ಷಣಗಳು ಗೋಚರಿಸಿದಾಗ ಮೊದಲು ವೈದ್ಯರನ್ನು ಕಾಣಬೇಕು ಎಂದರು.
ಡೆಂಗಿ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಬಿತ್ತಿ ಪತ್ರ,ಪೋಸ್ಟರ್ ಹಾಗೂ ದ್ವನಿ ವರ್ಧಕ ಮೂಲಕ ಸಾರ್ವಜನಿಕರಿಗೆ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಉದ್ದೇಶವನ್ನು ಡೆಂಗ್ಯು ರಥ ಜಾಗೃತಿ ವಾಹನ ಹೊಂದಿದೆ ಎಂದರು.
ಅಭಿಯಾನದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಎಸ್.ತೇರದಾಳ, ಮೇಲ್ವಿಚಾರಕಿ ಐ.ಸಿ.ಮಾನಕರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಸ್.ಶಿವಯೋಗಿಮಠ, ಏನ್.ಜಿ.ತಾಳಿಕೋಟಿ, ಆರೋಗ್ಯ ನಿರಿಕ್ಷಣಾಧಿಕಾರಿ ಎಂ.ಎಸ್.ಗೌಡರ, ಎಸ್.ಆರ್.ಸಜ್ಜನ, ರೇಷ್ಮ ರೂಡಗಿ, ಎಂಟಿಎಸ್ ಎಸ್.ಸಿ.ರುದ್ರವಾಡಿ, ಬಿಪಿಎಂಓ ಬಸವರಾಜ ,ಲಕ್ಷ್ಮಿ ಚವಾಣ್ ಆಶಾ ಮೇಲ್ವಿಚಾರಕಿ ಪ್ರಶಿಭಾರಾಣಿ ಹಾಗೂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
Related Posts
Add A Comment