ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಕ್ಷದ ಸಂಘಟನೆಗೆ ಸಹಕಾರಿಯಾಗುವಂತೆ ಹೂವಿನಹಿಪ್ಪರಗಿ ಬಿಜೆಪಿ ಮಂಡಲ ರಚನೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರು ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ದೇವರಹಿಪ್ಪರಗಿ ಹಾಗೂ ಸಿಂದಗಿ ಮತಕ್ಷೇತ್ರದ ಬಿಜೆಪಿ ಧುರೀಣರು ಹಾಗೂ ಪದಾಧಿಕಾರಿಗಳು ಮಂಡಲ ರಚನೆಯ ಕುರಿತು ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಸುಮಾರು ೧೩೫ ಕಿ.ಮೀ ವಿಸ್ತಾರವಾಗಿದ್ದು ಮುಂಬರುವ ಜಿಲ್ಲಾ, ತಾಲ್ಲೂಕು, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳ ಕಾರಣದಿಂದ ಮತ್ತು ಮುಖ್ಯವಾಗಿ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಅನುಕೂಲವಾಗುವಂತೆ ೪ ಜಿಲ್ಲಾ ಪಂಚಾಯಿತಿಗಳನ್ನೊಳಗೊAಡ ಹೂವಿನಹಿಪ್ಪರಗಿ ಮಂಡಲ ರಚನೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ.ರಾಜೀವ ಮತ್ತು ಪ್ರೀತಮ್‌ಗೌಡ ನೂತನ ಮಂಡಲ ರಚನೆಯ ಭರವಸೆ ನೀಡಿದರು.
ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕ ರಮೇಶ ಭೂಸನೂರ, ದೇವರಹಿಪ್ಪರಗಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಸಿಂದಗಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ(ಡಂಬಳ), ಸಾಬು ಮಾಶ್ಯಾಳ, ಸಿದ್ರಾಮಯ್ಯ ಮಠ(ಸಾತಿಹಾಳ), ಮಂಜುನಾಥ ಬಡಿಗೇರ, ಶಿವಾನಂದ ಹುಲ್ಲೂರ ಇದ್ದರು.

