ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಇಂದು ಸೋಮವಾರ ಆಚರಿಸಲಾಯಿತು.
ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಟಿದ ಕುಲಪತಿ ಡಾ. ಅರುಣ ಚಂ. ಇನಾಮದಾರ, ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಗಳು ಯುವಜನತೆಗೆ ಪ್ರೇರಣೆಯಾಗಿವೆ. ಅವರ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ಅಧೀಕ್ಷಕ, ಡಾ. ಸಂಜೀವಕುಮಾರ ಬೆಂಟೂರ, ಡಾ. ಅಶೋಕ ತರಡಿ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

