ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೨೩ ರಂದು ವೀರ ರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ವೀರ ರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅ.೨೩ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರ ಮೆರವಣಿಗೆ, ಬೆಳಿಗ್ಗೆ ೧೦:೩೦ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ರಾಣಿ ಚನ್ನಮ್ಮ ಕುರಿತು ಉಪನ್ಯಾಸ ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕಿತ್ತೂರ ಉತ್ಸವ ೨೦೨೩ರ ವೀರ ಜ್ಯೋತಿ ಯಾತ್ರೆಯು ಜಿಲ್ಲೆಯ ಕೋಲ್ಹಾರ ತಾಲೂಕಿಗೆ ಅ.೧೫ರ ಸಾಯಂಕಾಲ ೫ ಗಂಟೆಗೆ ಆಗಮಿಸಲಿದ್ದು ವೀರ ಜ್ಯೋತಿ ಯಾತ್ರೆಗೆ ಜಿಲ್ಲಾಧಿಕಾರಿಗಳು ಬರಮಾಡಿಕೊಳ್ಳಲಿದ್ದಾರೆ. ನಂತರ ವಿಜಯಪುರದಿಂದ ಅಥಣಿಗೆ ವೀರ ಜ್ಯೋತಿ ಯಾತ್ರೆ ತೆರಳಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಮುದಾಯದ ಮುಂಖಡರು ಅರ್ಥಪೂರ್ಣ ಜಯಂತಿ ಆಚರಿಸುವುದಕ್ಕಾಗಿ ತಮ್ಮ ಸಲಹೆಗಳನ್ನು ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರಣ್ ಕುಮಾರ್, ಮುಖಂಡರಾದ ಬಿ.ಎಂ.ಪಾಟೀಲ್,ಡಾ.ಜಿ.ಎಸ್.ಮಾಲಿಪಾಟೀಲ,ನಿಂಗಪ್ಪ ಸಂಗಾಪೂರ,ಗೀತಾಂಜಲಿ ಪಾಟೀಲ,ನಿಂಗನಗೌಡ ಸೋಲಾಪುರ ಎಂ.ಜಿ ಯಾದವಾಡ,ಸಿದ್ದಗೊಂಡ ಎಸ್ ಬಿರಾದಾರ, ಅಡಿವೆಪ್ಪ ಸಾಲಗಲ್, ಸೋಮನಗೌಡ ಕಲ್ಲೂರ,ಮೀರೇಕರ್,ಭೀಮರಾಯ ಜಿಗಜಿಣಗಿ ಉಪಸ್ಥಿತರಿದ್ದರು.
Related Posts
Add A Comment